Untitled Document
Sign Up | Login    
ಹಿರಿಯ ಪ್ರಾಥಮಿಕ ತರಗತಿಯಾಗಿ 8ನೇ ತರಗತಿ:ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಾರಿ


2013-14ನೇ ಸಾಲಿನ ಶೈಕ್ಷಣಕ ವರ್ಷದಿಂದ 8ನೇ ತರಗತಿ ಪ್ರೌಡಶಾಲಾ ವಿಭಾಗಕ್ಕೆ ಸೇರ್ಪಡೆಯಾಗುವುದಿಲ್ಲ. ಬದಲಾಗಿ ಹಿರಿಯ ಪ್ರಾಥಮಿಕ ಶಾಲೆಗೆ ಪರಿಗಣನೆಯಾಗಲಿದೆ. ಅಂದರೆ 8ನೇ ತರಗತಿ ವಿದ್ಯಾರ್ಥಿಗಳನ್ನು ಇನ್ನುಮುಂದೆ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳೆಂದು ಪರಿಗಣಿಸಲಾಗುವುದು. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

8ನೇ ತರಗತಿಯಿಂದ 10ನೆತರಗತಿವರೆಗಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳಲ್ಲಿ 8ನೇ ತರಗತಿಯನ್ನು ಹಿರಿಯ ಪ್ರಾಥಮಿಕ ಶಾಲಾ ವಿಭಾಗ ಎಂದು ಪರಿಗಣಿಸಿ ವಿದ್ಯಾರ್ಥಿಗಳನ್ನು ಪ್ರತ್ಯೇಕ ದಾಖಲಾತಿ ಮಾಡಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಎಸ್ ಆರ್ ಉಮಾಶಂಕರ್ ತಿಳಿಸಿದ್ದಾರೆ. ಅಲ್ಲದೇ 8ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಯಾ ಶಾಲಾ ಮುಖ್ಯ ಶಿಕ್ಷಕರು ವರ್ಗಾವಣೆ ಪತ್ರ ನೀಡಿ 9ನೇ ತರಗತಿಗೆ ಪ್ರತ್ಯೇಕವಾಗಿ ದಾಖಲಾತಿ ಮಾಡಿಕೊಳ್ಳಬೇಕು.
ಈಗಾಗಲೇ ಸಾರ್ವಜನಿಕ ಅಭಿಯಾನ ಯೋಜನೆಯಡಿ 4,೦೦೦ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 8ನೇ ತರಗತಿಯನ್ನು ಪ್ರಾರಂಭಿಸಲಾಗಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಶಾಲೆಗಳಲ್ಲಿ 1ರಿಂದ 8ನೇ ತರಗತಿಗಳು ಮುಂದುವರೆಯಲಿವೆ ಎಂದು ಇಲಾಖೆ ತಿಳಿಸಿದೆ.

1ರಿಂದ 7ನೇ ತರಗತಿವರೆಗಿನ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಹೊಸದಾಗಿ 8ನೇ ತರಗತಿಯನ್ನು ಉನ್ನತೀಕರಿಸುವಂತೆ ನೀಡಲಾಗಿದ್ದ ಆದೇಶಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ತಾತ್ಕಾಲಿಕ ತಡೆ ನೀಡಿದೆ. ಆದರೆ ಅನುದಾನರಹಿತ ಪ್ರಾಥಮಿಕ ಶಾಲಾ ಆಡಳಿತ ಮಂಡಳಿಯವರು 8ನೇ ತರಗತಿ ಉನ್ನತಿಕರಿಸಲು ಬಯಸಿದಲ್ಲಿ ಸಂಬಂಧಿಸಿದ ಉಪ ನಿರ್ದೇಶಕರು ಶಾಲೆಗೆ ಭೇಟಿ ನೀಡಿ, 8ನೇ ತರಗತಿಗೆ ಅಗತ್ಯ ಮೂಲ ಸೌಲಭ್ಯ ಹೊಂದಿರುವ ಹಾಗೂ ತರಬೇತಿ ಹೊಂದಿದ ಶಿಕ್ಷಕರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಅಲ್ಲದೇ ಆಂಗ್ಲ ಮಾಧ್ಯಮ ಶಾಲೆಗಳೂ 8ನೇ ತರಗತಿ ಉನ್ನತಿಕರಿಸಲು ಇದೇ ನಿಯಮ ಪಾಲಿಸಬೇಕು ಎಂದು ತಿಳಿಸಲಾಗಿದೆ.

 

Author : ಚಂದ್ರಲೇಖಾ ರಾಕೇಶ್

More Articles From Education & Career

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited