Untitled Document
Sign Up | Login    
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ


ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಗ್ರಾಮಾಂತರ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ’ಕರ್ನಾಟಕ ಪಬ್ಲಿಕ್ ಶಾಲೆ’ ಎಂಬ ಹೆಸರಿನ ಸಕಲ ಸೌಲಭ್ಯಗಳುಳ್ಳ ಶಾಲೆ ಆರಂಭಿಸಲು ಸರ್ಕಾರ ಮುಂದಾಗಿದೆ.

ಈ ಹಿನ್ನಲೆಯಲ್ಲಿ ಪ್ರಾಯೋಗಿಕ ಶಾಲೆಗಳನ್ನು ಆರಂಭಿಸಲು ಜೂನ್ 21ರೊಳಗೆ ಪ್ರಸ್ತಾವನೆ ಸಲ್ಲಿಸುವಂತೆ ಎಲ್ಲ ಜಿಲ್ಲೆಗಳ ಉಪನಿರ್ದೇಶಕರಿಗೆ ಪ್ರಾಥಮಿಕ ಶಿಕ್ಷಣ ಇಲಾಖೆ ಈಗಾಗಲೇ ಸೂಚನೆ ನೀಡಿದೆ.

ಆರ್ ಟಿ ಐ (ಶಿಕ್ಷಣ ಹಕ್ಕು ಕಾಯ್ದೆ) ಜಾರಿ ಸೇರಿದಂತೆ ಶಾಲಾ ಶಿಕ್ಷಣ ಉತ್ತಮಪಡಿಸಲು ರಾಜ್ಯ ಸರ್ಕಾರ ಎಷ್ಟೇ ಕ್ರಮ ಕೈಗೊಂಡರೂ ಜನತೆ ಸರ್ಕಾರಿ ಶಾಲೆಗಳಿಂದ ವಿಮುಖರಾಗುತ್ತಿದ್ದಾರೆ. ಜನರನ್ನು ಮತ್ತೆ ಸರ್ಕಾರಿ ಶಾಲೆಗಳತ್ತ ಆಕರ್ಷಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಶಾಲೆಯೊಂದನ್ನು ಸ್ಥಾಪಿಸಿ, ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ಗುಣಮಟ್ಟದ ಶಿಕ್ಷಣ ನೀಡಬೆಕು ಎಂಬುದು ಸರ್ಕಾರದ ಉದ್ದೇಶವಾಗಿದೆ.
ಉತ್ತಮವಾದ ಕಟ್ಟಡ, ವಿಶಾಲವಾದ ಮೈದಾನ, ಪ್ರಯೋಗಾಲಯ, ಸುಸಜ್ಜಿತವಾದ ಲೈಬ್ರರಿ, ಕಂಪ್ಯೂಟರ್ ಶಿಕ್ಷಣ, ಶೌಚಾಲಯ ಹಾಗೂ ಪ್ರತಿಯೊಂದು ವಿಷಯ ಮತ್ತು ವಿಭಾಗಗಳಿಗೂ ಪ್ರತ್ಯೇಕ ಶಿಕ್ಷಕರನ್ನು ಒದಗಿಸುವುದು ಕರ್ನಾಟಕ ಪಬ್ಲಿಕ್ ಶಾಲೆಯ ಗುರಿ. ಗ್ರಾಮ ಪಂಚಾಯತಿ ಹಂತದಲ್ಲಿ ಜವಾಹರ್ ನವೋದಯ ವಿದ್ಯಾಲಯ ಅಥವಾ ಕೇಂದ್ರೀಯ ವಿದ್ಯಾಲಯಗಳ ಮಾದರಿಯಲ್ಲಿ ಗುಣಮಟ್ಟದ ಶಾಲೆಗಳನ್ನು ಒದಗಿಸಿ ಈ ಶಾಲೆಯತ್ತ ಮಕ್ಕಳನ್ನು ಸೆಳೆಯುವುದೇ ಸರ್ಕಾರದ ಉದ್ದೇಶ.

ಪ್ರಾಯೋಗಿಕವಾಗಿ ಪ್ರಸ್ತುತ ಜಿಲ್ಲೆಯಲ್ಲಿ ಆಯ್ದ ಒಂದು ಗ್ರಾಮ ಪಂಚಾಯತಿ ಹಂತದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯನ್ನು ತೆರೆಯಲು ಸೂಚಿಸಲಾಗಿದ್ದು, ಜಿಲ್ಲಾ ಉಪನಿರ್ದೇಶಕರು ಅಂತಹ ಗ್ರಾಮ ಪಂಚಾಯಿತಿ ಗುರುತಿಸಿ ಕರಡು ಪ್ರಸ್ತಾವನೆ ಸಿದ್ಧಪಡಿಸಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ಪ್ರಸ್ತಾವನೆ ಪರಿಷ್ಕರಿಸಿ ಜೂನ್ 21ರೊಳಗೆ ಪ್ರಾಥಮಿಕ ಶಿಕ್ಷಣ ಇಲಾಖೆಗೆ ಕಳುಹಿಸಿಕೊಡಲಾಗುತ್ತದೆ.

 

Author : ಲೇಖಾ ಆರ್

More Articles From Education & Career

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited