Untitled Document
Sign Up | Login    
ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯ ಸಂಕೇತವಾದ ನವರಾತ್ರಿ

ನವರಾತ್ರಿಯಲ್ಲಿ ನವದುರ್ಗೆಯರನ್ನು ವಿಶೇಷವಾಗಿ ಆರಾಧಿಸಲಾಗುತ್ತದೆ.

ನವರಾತ್ರಿ ಒಂಭತ್ತು ರಾತ್ರಿಗಳ ಸಮೂಹ. ಹಿಂದೆ ಐದು ನವರಾತ್ರಿ ಆಚರಣೆ ವಿಶೇಷವಾಗಿತ್ತು. ಈಗ ಎರಡು ನವರಾತ್ರಿ ವಿಶೇಷವಾಗಿದ್ದು, ಆಚರಣೆಯಲ್ಲಿದೆ. ಒಂದು ಶರನ್ನವರಾತ್ರಿ ಇನ್ನೊಂದು ಚೈತ್ರ ನವರಾತ್ರಿ. ಈಗ ನಾವು ಆಚರಿಸುವುದು ಶರನ್ನವರಾತ್ರಿ.

ನವರಾತ್ರಿ ಎಲ್ಲ ಜನರೂ ಆಚರಿಸುವ ಒಂದು ವಿಶಿಷ್ಟವಾದ ಹಬ್ಬ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನವರಾತ್ರಿ ಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಶಕ್ತಿಯ ಆರಾಧನೆ ಈ ಹಬ್ಬದ ವೈಶಿಷ್ಟ್ಯ. ಮಂಗಳವಾರದಿಂದ 9 ದಿನಗಳ ಕಾಲ ಆಚರಿಸುವ ಈ ಪರ್ವಕ್ಕೆ ದುರ್ಗೋತ್ಸವ ಎಂದೂ ಕರೆಯುತ್ತಾರೆ.

ವಿಜಯನಗರದ ಅರಸರು ಹಾಗೂ ಮೈಸೂರು ಅರಸರು ಜೈತ್ರಯಾತ್ರೆಯಲ್ಲಿ ಗೆಲುವು ಪಡೆದು ಸಂಭ್ರಮದಿಂದ ನಡೆಸುವ ವಿಶಿಷ್ಟ ಹಬ್ಬ ಎಂಬುದು ಇತಿಹಾಸದ ಉಲ್ಲೇಖ.

ಪುರಾಣದ ಪ್ರಕಾರ ಜಗನ್ಮಾತೆ ರಾಕ್ಷಸರನ್ನು ಸಂಹಾರ ಮಾಡಲು ಒಂದೊಂದು ಅವತಾರವೆತ್ತಿ ರಾಕ್ಷಸರನ್ನು ಸಂಹರಿಸಿ ಲೋಕವನ್ನು ಕಾಪಾಡುತ್ತಾಳೆ. ನವರಾತ್ರಿಯ ಒಂದೊಂದು ದಿನವೂ ಬಹಳ ವಿಶೇಷವಾಗಿ ನಿಲ್ಲುತ್ತದೆ. 9 ದಿನಗಳ ಕಾಲ ಆದಿ ಶಕ್ತಿಯನ್ನು ನವ ವಿಧದಲ್ಲಿ ಪೂಜಿಸಲಾಗುತ್ತದೆ.

ಮೊದಲ ದಿನ ಅಂದರೆ ಪಾಡ್ಯದ ದಿನ ಯೋಗನಿದ್ರಾ ದುರ್ಗಾ ಪೂಜಾ.
ಎರಡನೇ ದಿನ ಆಂದರೆ ಬಿದಿಗೆ ದಿನ ದೇವಜಾತ ದುರ್ಗಾಪೂಜಾ.
ಮೂರನೇ ದಿನ ತದಿಗೆ - ಮಹಿಷಾಸುರ ಮರ್ಧಿನಿ ದುರ್ಗಾಪೂಜಾ.
ನಾಲ್ಕನೇ ದಿನ ಚತುರ್ದಶಿ - ಶೈಲ ಜಾತಾ ದುರ್ಗಾಪೂಜಾ.
ಐದನೇ ದಿನ ಪಂಚಮಿ - ದೂಮೃಹಾ ದುರ್ಗಾಪೂಜಾ.
ಆರನೇ ದಿನ ಶಷ್ಠಿ - ಚಂಡ-ಮುಂಡ ಹಾ ದುರ್ಗಾಪೂಜಾ.
ಏಳನೇ ದಿನ ಸಪ್ತಮಿ - ರಕ್ತ ಬೀಜ ಹಾ ದುರ್ಗಾಪೂಜಾ.
ಎಂಟನೇ ದಿನ ಅಷ್ಟಮಿ - ನಿಶುಂಭ ಹಾ ದುರ್ಗಾಪೂಜಾ.(ದುರ್ಗಾಷ್ಠಮಿ)
ಒಂಭತ್ತನೇ ದಿನ ಮಹಾನವಮಿ -ಶುಂಭ ಹಾ ದುರ್ಗಾಪೂಜಾ.

ಏಳನೇ ದಿನ ಅಂದರೆ ಸಪ್ತಮಿಯಿಂದ ತ್ರಿದಿನ ದುರ್ಗಾಪೂಜಾ ಎಂದೂ ಮಾಡುತ್ತಾರೆ. ಅಂದರೆ ಮಹಾಕಾಳಿ, ಮಹಾಲಕ್ಷ್ಮಿ, ಮಹಾಸರಸ್ವತಿ ಪೂಜೆ ಮಾಡಲಾಗುತ್ತದೆ. ನವರಾತ್ರಿಯಲ್ಲಿ ಸಪ್ತಮಿಗೆ ವಿಶೇಷ ಸ್ಥಾನವಿದೆ. ಸಪ್ತಮಿಯ ಮೂಲಾನಕ್ಷತ್ರದಂದು ಪುಸ್ತಕ, ಪವಿತ್ರಗ್ರಂಥಗಳನ್ನು, ಚಿನ್ನ, ಬೆಳ್ಳಿ ಪೂಜೆಗಿಡಲಾಗುತ್ತದೆ. ಹಾಗೂ ನವಮಿಯಂದು ಆಯುಧಗಳನ್ನು ಪೂಜಿಸಲಾಗುತ್ತದೆ. ಅಂದೇ ಪುಸ್ತಕಗಳನ್ನಿಟ್ಟು ಪೂಜಿಸಲಾಗುತ್ತದೆ ಇದಕ್ಕೆ ಸರಸ್ವತಿ ಪೂಜೆ ಎಂದೂ ಕರೆಯುತ್ತಾರೆ.


ನವರಾತ್ರಿಯೆಂದರೆ ಒಂಭತ್ತು ದಿನಗಳಿಗೆ ಸೀಮಿತವಾಗಿದ್ದರೂ ಹತ್ತನೇ ದಿನ ವಿಜಯದಶಮಿ. ಮಹಾದುರ್ಗೆ ರಾಕ್ಷಸರನ್ನು ಸಂಹರಿಸಿ ವಿಜಯವನ್ನು ಸಾಧಿಸಿದ ದಿನ.

ನವರಾತ್ರಿಯ ಕುರಿತು ಪುರಾಣಗಳಲ್ಲಿ ಹಲವು ಉಲ್ಲೇಖಗಳಿವೆ. ಹಲವು ಕಥೆಗಳಿವೆ.. ನವರಾತ್ರಿಯಲ್ಲಿ ಚಾಮುಂಡೇಶ್ವರಿ /ದುರ್ಗದೇವಿಯು ಮಹಿಷಾಸುರ ಮರ್ಧಿನಿಯಾಗಿ ಮಹಿಷಾಸುರ ಎಂಬ ರಾಕ್ಷಸನನ್ನು ಸಂಹಾರ ಮಾಡಿದಳು .

ತ್ರೇತಾಯುಗದಲ್ಲಿ ಶ್ರೀರಾಮನು ರಾವಣನನ್ನು ಸಂಹಾರ ಮಾಡಿದನು. ಅದು ವಿಜಯದಶಮಿಯ ದಿನ ಎಂಬ ನಂಬಿಕೆ ಇದೆ. ದ್ವಾಪರಾಯುಗದಲ್ಲಿ ಪಾಂಡವರು ಒಂದು ವರ್ಷ ಅಜ್ನಾತವಾಸ ಮಾಡುವಾಗ ತಮ್ಮ ಆಯುಧಗಳನ್ನು ಬನ್ನಿ ಮರದಲ್ಲಿ ಮುಚ್ಚಿಟ್ಟಿದ್ದರು. ದಶಮಿಯ ದಿನಕ್ಕೆ ಅಜ್ಞಾತವಾಸ ಮುಗಿದು, ಅವರು ಬನ್ನಿ ಮರದಿಂದ ತಮ್ಮ ಆಯುಧಗಳನ್ನು ವಾಪಸ್ಸು ಪಡೆದು ಕುರುಕ್ಷೇತ್ರ ಯುದ್ಧದಲ್ಲಿ ಕೌರವರನ್ನು ಸೋಲಿಸಿ ವಿಜಯಸಾಧಿಸಿದರು ಎಂದು ಹೇಳುತ್ತಾರೆ. ಹೀಗಾಗಿ ಈ ದಶಮಿಯನ್ನು ವಿಜಯದಶಮಿ ಎಂದು ಕರೆಯುತ್ತಾರೆ

ಆದ್ದರಿಂದ ಇವರೆಲ್ಲರ ವಿಜಯದ ಸಂಕೇತವಾಗಿ ಈ ದಿನವನ್ನು ವಿಜಯದಶಮಿ ಎಂದು ಆಚರಿಸುವುದು ಸಂಪ್ರದಾಯ.

 

Author : ಚಂದ್ರಲೇಖಾ ರಾಕೇಶ್ .

More Articles From Religion & Spirituality

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited