Untitled Document
Sign Up | Login    
ದೇಶಾದ್ಯಂತ ವಿವಿಧ ರೀತಿಯಲ್ಲಿ ಆಚರಿಸುವ ಹಬ್ಬ ಸಂಕ್ರಾಂತಿ

ಸಂಕ್ರಾಂತಿ ಹಬ್ಬದ ಶುಭಾಷಯಗಳು

ಮಕರ ಸಂಕ್ರಾಂತಿ ಮತ್ತೆ ಬಂದಿದೆ. ಸಂಕ್ರಾಂತಿ ಹಬ್ಬದಂದು ಎಳ್ಳು ಬೆಲ್ಲ ಹಂಚಿ ಸಂಭ್ರವಿಸುವುದರ ಜೊತೆಯಲ್ಲೇ ವೈಜ್ನಾನಿಕ ಹಿನ್ನೆಲೆಯೂ ಇದೆ. ಸನಾತನ ಹಿಂದೂ ಧರ್ಮದ ಬುನಾದಿಯಾಗಿರುವ ವೇದಗಳ ಅಂಗಗಳೆಂದೇ ಪ್ರಸಿದ್ಧವಾಗಿರುವ ಆರು ವೇದಾಂಗಗಳಲ್ಲಿ ಒಂದಾದ ಜ್ಯೋತಿಷವನ್ನು ವೇದಗಳ ಕಣ್ಣೆಂದು ಗುರುತಿಸುತ್ತಾರೆ. ಇದರಂತೆಯೇ, ಸೂರ್ಯನು ನಿರಯಣ ಮಕರರಾಶಿಯನ್ನು ಪ್ರವೇಶಿಸಿದಾಗ, "ಮಕರ ಸಂಕ್ರಾಂತಿ"ಯಾಗುತ್ತದೆ. ಈ ಕಾಲವೇ ಉತ್ತರಾಯಣ ಅಥವಾ ಸೂರ್ಯನ ಉತ್ತರದಿಕ್ಕಿನ ಪಯಣದ ಆರಂಭವನ್ನು ಸೂಚಿಸುವ ಕಾಲವೂ ಆಗಿತ್ತಾದ್ದರಿಂದ ಭೂಮಿಯ ಉತ್ತರಾರ್ಧಗೋಳದಲ್ಲಿ ಚಳಿ-ಬೆಚ್ಚನೆಯ ವಾತಾವರಣ ಆರಂಭವಾಗಿ, ಬೆಳೆ ಕಟಾವಿನ ಕಾಲವೂ ಆಗಿತ್ತು. ಮಹಾಭಾರತದಲ್ಲಿ ಇಚ್ಚಾ ಮರಣಿಯಾದ ಬೀಷ್ಮರು ಪ್ರಾಣ ಬಿಡಲು ಉತ್ತರಾಯಣ ಪರ್ವ ಕಾಲವನ್ನು ಕಾದಿದ್ದರು ಎಂಬ ಉಲ್ಲೆಖವಿದೆ.

ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು "ಎಳ್ಳು ಬೆಲ್ಲ". ಮನೆಯಲ್ಲಿ ಎಳ್ಳ್ಳು ಬೆಲ್ಲವನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ "ಎಳ್ಳುಹಂಚುವುದು" ಸಂಕ್ರಾಂತಿಯ ಸಂಪ್ರದಾಯ. ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು,ಹಣ್ಣು,ಮತ್ತು ಕಬ್ಬಿನ ತುಂಡುಗಳನ್ನು ಸಹ ಬೀರುವುದುಂಟು.ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ ಬೆಲ್ಲ, ಒಣ ಕೊಬ್ಬರಿ, ಹುರಿಗಡಲೆ , ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ "ಎಳ್ಳು ಬೆಲ್ಲ" ತಯಾರಿಸಲಾಗುತ್ತದೆ.

ಕರ್ನಾಟಕದ ರೈತರಿಗೆ ಸುಗ್ಗಿ (ಸುಗ್ಗಿ) ಅಥವಾ ಸುಗ್ಗಿಯ ಹಬ್ಬ. ಈ ಮಂಗಳಕರ ದಿನದಂದು, ಹೊಸ ಬಟ್ಟೆಗಳನ್ನು ಧರಿಸಿ ಒಂದು ತಟ್ಟೆಯಲ್ಲಿ ಎಳ್ಳುಬೆಲ್ಲದೊಂದಿಗೆ ಹತ್ತಿರದ ಜನರನ್ನು ಮತ್ತು ಸಂಬಂಧಿಗಳನ್ನು ಭೇಟಿಯಾಗಿ ಎಳ್ಳುಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ . "ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡೋಣ" ಎಂದು ಹೇಳಿಕೊಳ್ಳುತ್ತಾರೆ. ಕಬ್ಬಿನ ತುಂಡು ವಿವಿಧ ಆಕಾರಗಳನ್ನು ಸಕ್ಕರೆ ಅಚ್ಚುಗಳನ್ನು ಹೊಂದಿರುತ್ತದೆ. ಕಬ್ಬು ಈ ಭಾಗಗಳಲ್ಲಿ ಪ್ರಧಾನ ಏಕೆಂದರೆ ಹಬ್ಬದ ಋತುವಿನ ಸುಗ್ಗಿಯ ಸೂಚಿಸುತ್ತದೆ.
ಉತ್ತರ ಕರ್ನಾಟಕದಲ್ಲಿ, ಸಮುದಾಯದ ಸದಸ್ಯರೊಂದಿಗೆ ಗಾಳಿಪಟ ಹಾರಿಸುವ ಸಂಪ್ರದಾಯವಿದೆ . ಮಹಿಳೆಯರು ಗುಂಪು ಗುಂಪಾಗಿ ರಂಗೋಲಿಯನ್ನು ಬಿಡಿಸುವುದು ಸಂಕ್ರಾಂತಿಯ ಸಮಯದ ಮತ್ತೊಂದು ಜನಪ್ರಿಯ ಘಟನೆಯಾಗಿದೆ. ದನಕರುಗಳನ್ನು ಸಿಂಗರಿಸುವುದು ಮತ್ತು ಮೆರವಣಿಗೆ ಮಾಡುವುದು ಇನ್ನೊಂದು ಧಾರ್ಮಿಕ ಪದ್ಧತಿಯಾಗಿದೆ. ಅವುಗಳನ್ನು "ಕಿಚ್ಚು ಹಾಯಿಸುವುದು" ಹಳ್ಳಿಗಳಲ್ಲಿ ಸಾಮಾನ್ಯವಾಗಿದೆ.

ಇನ್ನು ಮಕರ ಸಂಕ್ರಾಂತಿ ಎಂದೊಡನೆ ನೆನಪಿಗೆ ಬರುವುದು ಕೇರಳದ ಶಬರಿಮಲೆ. ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ತಮ್ಮ ಸ್ವಾಮಿಯ ಪಾದಕ್ಕೆರಗಿ ಮಕರ ಜ್ಯೋತಿಯ ದರ್ಶನವನ್ನು ಪಡೆದರೆ ಜನ್ಮ ಸಾರ್ಥಕವಾಗುವುದೆಂಬ ನಂಬಿಕೆಯಿಂದಾಗಿ ಲಕ್ಷೋಪಲಕ್ಷ ಜನರು ಈ ಜ್ಯೋತಿಯ ದರ್ಶನಕ್ಕಾಗಿ ವರ್ಷಂಪ್ರತಿ ಶಬರಿಮಲೆ ಸನ್ನಿಧಾನಕ್ಕಾಗಮಿಸುತ್ತಾರೆ."ಮಕರ ವಿಳಕ್ಕು"ಎಂದು ಕರೆಯಲ್ಪಡುವ ಈ ಜ್ಯೋತಿಯು ಶಬರಿಮಲೆಯ ಬೆಟ್ಟದಿಂದ ಮೂರು ಬಾರಿ ಗೋಚರವಾಗುತ್ತಿದ್ದು, ಅಂತೂ ಇದು ವೈಜ್ಞಾನಿಕವಾಗಿಸಾಬೀತಾಗಿಲ್ಲವಾದರೂ, ಪ್ರಸ್ತುತ ಕಾಲದಲ್ಲಿಯೂ ಆಧ್ಯಾತ್ಮಿಕತೆಯ ಕುರುಹನ್ನು ತೋರಿಸುತ್ತದೆ ಎನ್ನುತ್ತಾರೆ ಭಕ್ತರು. ಸೂರ್ಯ ಮಕರ ರಾಶಿಗೆ ಪ್ರವೇಶಿಸಿ ಲೋಕದ ಕಾರಿರುಳನ್ನು ಹೋಗಲಾಡಿಸುವಂತೆ ಜನರು ಈ ಕಾಲದಲ್ಲಿ ಪುಣ್ಯ ಕಾರ್ಯಗಳಲ್ಲಿಯೂ ಆಧ್ಯಾತ್ಮಿಕ ಚಿಂತೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಮುಕ್ತಿ ಮಾರ್ಗದಲ್ಲಿ ಸಾಗುವಂತೆ ಈ ಆಚರಣೆಯು ಪ್ರೇರಣೆಯನ್ನು ನೀಡುತ್ತದೆ. ಮುಖ್ಯವಾಗಿ ದಕ್ಷಿಣ ಭಾರತದ ಹಬ್ಬವಾದರೂ, ಇತರ ಸ್ಥಳಗಳಲ್ಲಿ ಸಹ ಬೇರೆ ಬೇರೆ ಹೆಸರುಗಳಲ್ಲಿ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ಸಂಕ್ರಾಂತಿಯ ದಿನದಂದು ಗಾಳಿಪಟಗಳನ್ನು ಹಾರಿಬಿಡುವ ಸಂಪ್ರದಾಯವುಂಟು. ಮಹಾರಾಷ್ಟ್ರದಲ್ಲಿಯೂ, ಎಳ್ಳು ಮತ್ತು ಸಕ್ಕರೆಯನ್ನು ಬಂಧು ಮಿತ್ರರಿಗೆ ಹಂಚುವ ರೂಢಿ ಇದೆ. ಪ್ರಮುಖವಾಗಿ ಅವರು, ಎಳ್ಳಿನ ಉಂಡೆ ಗಳನ್ನು ಹಂಚುತ್ತಾರೆ. ಅದಕ್ಕೆ ಅವರು ಲಡ್ಡು ಎನ್ನುತ್ತಾರೆ. ಕರ್ನಾಟಕದ ಸಂಪ್ರದಾಯದ ತರಹ ಬಿಡಿಕಾಳುಗಳನ್ನು ಹಂಚುವ ಪದ್ಧತಿಯಿಲ್ಲ! ಪಂಜಾಬ್ ಮತ್ತು ಹರಿಯಾಣಗಳಲ್ಲಿ ಸಂಕ್ರಾಂತಿಗೆ "ಲೋಹರಿ," ಎಂದು ಹೆಸರು. ಹೀಗೆ ಸಂಕ್ರಾಂತಿಯನ್ನು ದೇಶದ ವಿವಿಧ ಭಾಗಗಳಲ್ಲಿ ವಿವಿಧ ಹೆಸರುಗಳಿಂದ ಆಚರಿಸಲಾಗುತ್ತದೆ. ಆಚರಣೆಯ ವಿಧಾನ ಬೇರೆ ಬೇರೆಯಾದರೂ ಸಂಕ್ರಾಂತಿ ವಿವಿಧತೆಯಲ್ಲಿ ಏಕತೆ ಮೂಡಿಸುತ್ತದೆ.

 

Author : ಶ್ರೀನಿವಾಸ್ ರಾವ್

More Articles From Politics

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited