Untitled Document
Sign Up | Login    
Dynamic website and Portals
  
August 9, 2014

ಕಾಂಗ್ರೆಸ್ ನಲ್ಲಿ ಉನ್ನತ ಹುದ್ದೆ ವದಂತಿ: ಪ್ರಿಯಾಂಕಾ ಗಾಂಧಿ

ನವದೆಹಲಿ : ತಾವು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಉನ್ನತ ಹುದ್ದೆ ವಹಿಸಿಕೊಳ್ಳುವ ಮಾಧ್ಯಮಗಳ ವರದಿ ನಿರಾಧಾರ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನಲ್ಲಿ ನನಗೆ ಉನ್ನತ ಹುದ್ದೆ ಸಿಗಬಹುದು ಎಂಬ ವರದಿಗಳು ಸಂಪೂರ್ಣ ತಪ್ಪಿನಿಂದ ಕೂಡಿದೆ. ಇಂತಹ ನಿರಾಧಾರ ವರದಿಗಳಿಗೆ ನೀರೆರೆದು ಪೋಷಿಸಬೇಡಿ ಎಂದು ಮನವಿ ಮಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡ ಹಿನ್ನಲೆಯಲ್ಲಿ ಪಕ್ಷ ಸಂಘಟನೆಗಾಗಿ ಪ್ರಿಯಾಂಕಾ ಗಾಂಧಿಯವರಿಗೆ ಪಕ್ಷದಲ್ಲಿ ಉನ್ನತ ಹುದ್ದೆ ನೀಡುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬಂದಿದ್ದವು.

ಪ್ರಿಯಾಂಕಾ ಅವರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಥವಾ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬಹುದು ಎಂದು ಇತ್ತೀಚೆಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ಈ ಸುದ್ಧಿ ಸುಳ್ಳು ಎಂದು ಪ್ರಿಯಾಂಕಾ ಗಾಂಧಿ ಸ್ಪಷ್ಟಪಡಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited