ನವದೆಹಲಿ : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮಾಜಿ ಸಚಿವ, ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಅವರನ್ನು ನೇಮಕ ಮಾಡುವ ಸಾಧ್ಯೆಯಿದೆ.
ರಾಷ್ಟ್ರೀಯ ಘಟಕದ ಪುನಾರಚನೆಗೆ ಬಿಜೆಪಿ ಮುಂದಾಗಿದ್ದು, ಕರ್ನಾಟಕದ ಮುಖಂಡರಿಗೆ ಹುದ್ದೆ ನೀಡಲು ನಿರ್ಧರಿಸಿದೆ. ಅನಂತ್ ಕುಮಾರ್ ಕೇಂದ್ರ ಸಚಿವರಾಗಿರುವ ಹಿನ್ನಲೆಯಲ್ಲಿ ತೆರವಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಮೂವರು ಬಿಜೆಪಿ ರಾಜ್ಯ ನಾಯಕರ ಹೆಸರು ಕೇಳಿಬಂದಿತ್ತು. ಅರವಿಂದ್ ಲಿಂಬಾವಳಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಸಿ.ಟಿ.ರವಿ ಹೆಸರು ಕೇಳಿಬಂದಿತ್ತು.
ಅರವಿಂದ್ ಲಿಂಬಾವಳಿ, ಆರ್.ಎಸ್.ಎಸ್ ಹಾಗೂ ಬಿಜೆಪಿ ರಾಷ್ಟ್ರೀಯ ನಾಯಕರ ಜತೆ ಹೆಚ್ಚಾಗಿ ಗುರುತಿಸಿಕೊಂಡಿರುವ ಹಿನ್ನಲೆಯಲ್ಲಿ ಲಿಂಬಾವಳಿಯವರಿಗೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡುವ ಸಾಧ್ಯೆತೆಯಿದೆ ಎನ್ನಲಾಗುತ್ತಿದೆ. ಅಲ್ಲದೇ ಕೇಂದ್ರ ಸಚಿವ ಸದಾನಂದಗೌಡ, ಬಿ.ಎಸ್.ಯಡಿಯೂರಪ್ಪ ಕೂಡ ಅರವಿಂದ್ ಲಿಂಬಾವಳಿ ನೇಮಕಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದಾರೆ ಎನ್ನಲಾಗುತ್ತಿದೆ.