ನವದೆಹಲಿ : ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಸೆರೆ ಹಿಡಿಯಲು ಎನ್.ಡಿ.ಎ ಸರ್ಕಾರ ಕಾರ್ಯತಂತ್ರ ರೂಪಿಸುತ್ತಿದೆ. ಈ ಬಗ್ಗೆ ಬಲವಾದ ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ರಾಜನಥ್ ಸಿಂಗ್, ದಾವೂದ್ ಇಬ್ರಾಹಿಂ ನನ್ನು ಬಂಧಿಸಲಿದ್ದೇವೆ ಎಂದು ಹೇಳಿದ್ದಾರೆ.
ದಾವೂ ಇಬ್ರಾಹಿಂನನ್ನು ಬಂಧಿಸಲು ಈ ಹಿಂದಿನ ಯುಪಿಎ ಸರ್ಕಾರ ವಿಫಲವಾಗಿತ್ತು. ಆದರೆ ಬಿಜೆಪಿ ಸರ್ಕಾರ ಸುಮ್ಮನೆ ಕೂರುವುದಿಲ್ಲ, ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ನನ್ನು ಬಂಧಿಸಲು ಎಲ್ಲಾ ರೀತಿಯಲ್ಲೂ ಪ್ರಯತ್ನಿಸುತ್ತಿದ್ದೇವೆ ಎಂದು ಸಂಸತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬರುವ ಸೂಚನೆ ದೊರೆಯುತ್ತಿದ್ದಂತೆಯೇ ದಾವೂದ್ ಇಬ್ರಾಹಿಂ ಪಾಕಿಸ್ತಾನದಿಂದಲೂ ಕಣ್ಮರೆಯಾಗಿದ್ದಾನೆ ಎಂಬ ವದಂತಿ ಹಬ್ಬಿತ್ತು. ಅಲ್ಲದೇ ದಾವೂದ್ ಇಬ್ರಾಹಿಂ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ ಆತನ ಚಟುವಟಿಕೆಗಳಿಗೆ ಆಧಾರವಾಗಿರುವ ಆರ್ಥಿಕ ಮೂಲಕ್ಕೇ ಕತ್ತರಿ ಹಾಕಲು ಯೋಜನೆ ರೂಪಿಸಿದೆ.
ಇದೇ ವೇಳೆ ದೆಹಲಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ಕುರಿತು ಮಾತನಾಡಿದ ರಾಜನಾಥ್ ಸಿಂಗ್, ಅಪರಾಧ ಪ್ರಕರಣಗಳನ್ನು ತಡೆಯಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಲಿದೆ. ದೆಹಲಿಯಲ್ಲಿ ವಿವಿಧೆಡೆ 8000 ಸಿಸಿಟಿವಿಗಳ ಅಳವಡಿಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.