Untitled Document
Sign Up | Login    
Dynamic website and Portals
  
August 12, 2014

ಒಡೆದ ಮನೆಯಾಗಿರುವ ಬಳ್ಳಾರಿ ಕಾಂಗ್ರೆಸ್ ನಲ್ಲಿ ಡಿ.ಕೆ.ಶಿಗೆ ಆಹಾರ ಸಿಗುತ್ತಿಲ್ಲ:ಶೆಟ್ಟರ್

ವಿಧಾನಸಭಾ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿಧಾನಸಭಾ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್

ಬಳ್ಳಾರಿ : 'ಬಳ್ಳಾರಿ' ಕಾಂಗ್ರೆಸ್ ಒಡೆದ ಮನೆಯಂತಾಗಿದ್ದು ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ನಾಯಕರು ಊಟ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.

ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಆ.12ರಂದು ಬಳ್ಳಾರಿಯಲ್ಲಿರುವ ಬಿಜೆಪಿ ನಾಯಕ ಶೆಟ್ಟರ್, ಸೋಮಶೇಖರ ರೆಡ್ಡಿ ನಿವಾಸಕ್ಕೆ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿರುವ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ್ದು ಬಳ್ಳಾರಿಯಲ್ಲಿ ಕಾಂಗ್ರೆಸ್ ಒಡೆದ ಮನೆಯಂತಾಗಿದೆ, ಕಾಂಗ್ರೆಸ್ ಮುಖಂಡರಲ್ಲಿ ಒಗ್ಗಟ್ಟಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡರು ಡಿಕೆಶಿಯನ್ನು ಮನೆಗೆ ಕರೆಯುತ್ತಿಲ್ಲ. ಊಟ ನೀರನ್ನೂ ನೀಡುತ್ತಿಲ್ಲ ಹೀಗಾಗಿ ಡಿ.ಕೆ.ಶಿ, ಸೋಮಶೇಖರ ರೆಡ್ಡಿ ನಿವಾಸಕ್ಕೆ ಭೇಟಿ ನೀಡಿದ್ದಾರೆ ಎಂದು ಶೆಟ್ಟರ್ ಲೇವಡಿ ಮಾಡಿದ್ದಾರೆ.

ಇಂಧನ ಸಚಿವ ಡಿ.ಕೆ ಶಿವಕುಮಾರ್ ಆಟ ಬಳ್ಳಾರಿಯಲ್ಲಿ ನಡೆಯುವುದಿಲ್ಲ, ಬಳ್ಳಾರಿಯಲ್ಲಿ ಬಿಜೆಪಿ ಗಟ್ಟಿಯಾಗಿದೆ, ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited