Untitled Document
Sign Up | Login    
Dynamic website and Portals
  
August 13, 2014

ಶಿಕಾರಿಪುರ ಕ್ಷೇತ್ರ ಉಪಚುನಾವಣೆ: ಜೆಡಿಎಸ್ ಬೆಂಬಲ ಕೋರಿದ ಕಾಂಗ್ರೆಸ್

ಸಿದ್ದರಾಮಯ್ಯ ಸಿದ್ದರಾಮಯ್ಯ

ಶಿವಮೊಗ್ಗ : ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸಲು ಜೆಡಿಎಸ್ ಮುಖಂಡರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಮುಖಂಡ ಹೆಚ್.ಟಿ.ಬಳಿಗಾರ್ ಜತೆ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಶಿಕಾರಿಪುರ ವಿಧಾನಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಮುಖಂಡರ ಬೆಂಬಲ ಕೋರಿದೆ.

ಬಳಿಗಾರ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಮುಖ್ಯಮಂತ್ರಿಗಳು ಆಹ್ವಾನ ನೀಡಿದ್ದಾರೆ. ಆದರೆ ಸಧ್ಯ ಕಾಂಗ್ರೆಸ್ ಗೆ ಸೇರಲ್ಲ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಾಹ್ಯ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕಾರಿಪುರ ಜೆಡಿಎಸ್ ಮುಖಂಡ ಹೆಚ್.ಟಿ.ಬಳಿಗಾರ್ ಅವರ ಜತೆ ಮಾತುಕತೆ ನಡೆಸಿದ್ದೇನೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಲು ಅವರು ಒಪ್ಪಿಗೆ ನೀಡಿದ್ದಾರೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಅಜಂಡಾ ಕೂಡ ಬಿಜೆಪಿ ಸೋಲಿಸುವುದೇ ಆಗಿದೆ ಎಂದರು.

ಇನ್ನು ಸೊರಬ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಅವರ ಜತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಕಾಂಗ್ರೆಸ್ ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಶಕ್ತಿಯಿದೆ. ಹೀಗಾಗಿ ಆ ಶಕ್ತಿಯನ್ನು ಬಳಸಿಕೊಳ್ಳುತ್ತಿದ್ದೇವೆ ಹೊರತು
ಬಳ್ಳಾರಿ ಹಾಗೂ ಶಿಕಾರಿಪುರದಲ್ಲಿ ಯಾವುದೇ ಆಪರೇಷನ್ ಹಸ್ತ ನಡೆಸುತ್ತಿಲ್ಲ ಎಂದು ತಿಳಿಸಿದರು.

ಇನ್ನು ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಿನೋಟಿಫಿಕೇಷನ್ ನಡೆದಿದೆ.2003ರಿಂದ ಈವರೆಗೂ ತನಿಖೆಗೆ ಆದೇಶಿಸಲಾಗಿದೆ ಎಂದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited