Untitled Document
Sign Up | Login    
Dynamic website and Portals
  
August 15, 2014

ಮಾಣಿಕ್ ಷಾದಲ್ಲಿ ಸಿಎಂ ಧ್ವಜಾರೋಹಣ: ರಾಜ್ಯದ ಜತೆಗೆ ಸ್ವಾತಂತ್ರೋತ್ಸವದ ಶುಭಾಷಯ

ಮಾಣಿಕ್ ಷಾದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಣಿಕ್ ಷಾದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ಬೆಂಗಳೂರು : ದೇಶಾದ್ಯಾಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ರಾಜ್ಯ ರಾಜ್ಯಧಾನಿಯಲ್ಲಿಯೂ ಸ್ವಾತಂತ್ರ್ಯ ದಿನದ ಸಂಭ್ರಮ ಮೊಳಗಿದೆ. ರಾಜ್ಯದ ಜನೆತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 68ನೇ ಸ್ವಾತಂತ್ರೋತ್ಸವ ದಿನಾಚರಣೆಶುಭಾಷಯಗಳನ್ನು ಕೋರಿದ್ದಾರೆ.

ಮಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ವಾಹನದಲ್ಲಿ ನಿಂತು ಕವಾಯಿತು ವೀಕ್ಷಿಸಿದರು. ಬಳಿಕ ಸ್ವಾತಂತ್ರೋತ್ಸವದ ಅಂಗವಾಗಿ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಸಿವು, ಬಡತನ, ಭಯ ಮುಕ್ತ ರಾಜ್ಯವಾನ್ನಾಗಿ ಮಾಡುವುದೇ ನಮ್ಮ ಸಂಕಲ್ಪ ಎಂದರು.

ಮಧ್ಯರಾತ್ರಿಯಲ್ಲಿಯೂ ಮಹಿಳೆಯೊಬ್ಬಳು ನಿರ್ಭೀತಿಯಿಂದ ಓಡಾಡುವುದೇ ನಿಜವಾದ ಸ್ವಾತಂತ್ರ್ಯ ಎಂಬುದು ಮಹಾತ್ಮಾ ಗಾಂಧೀಜಿಯವರ ಕನಸಾಗಿತ್ತು. ನಮ್ಮ ಸರ್ಕಾರದ ಮುಖ್ಯ ಧೇಯವೂ ಇದೇ ಆಗಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲರಿಗೂ ನನ್ನ ನಮನ ಎಂದರು.

ನಾವು ಘೋಷಿಸಿದ ಪ್ರಣಾಳಿಕೆಯಲ್ಲಿ 95 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದ ಭರವಸೆಗಳನ್ನು ಶೀಘ್ರದಲ್ಲಿಯೇ ಈಡೇರಿಸಲಾಗುವುದು ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದ ಯೋಜನೆಗಳನ್ನು ಘೋಷಿಸಿದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯವನ್ನು ತಡೆಯಲು ಕ್ರಮಕೈಗೊಳ್ಳಲಾಗಿದ್ದು, ಗೂಂಡಾ ಕಾಯ್ದೆ ಜಾರಿಗೆ ತರಲಾಗಿದೆ. ಶಾಲಾ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ತಡೆಗೆ ಪ್ರತಿ ಶಾಲೆಯಲ್ಲಿಯೂ ಸುರಕ್ಷಾ ಸಮಿತಿ ರಚಿಸಲಾಗಿದೆ. ಪ್ರತಿ ಮಗು ಶಾಲೆಗೆ ಹೋದಾಗಿನಿಂದ ಮನೆಗೆ ತಲುಪುವವರೆಗೂ ಆ ಮಗುವಿನ ಜವಾಬ್ದಾರಿ ಶಾಲೆಯದ್ದೇ ಆಗಿರುತ್ತದೆ. ಮಹಿಳೆಯರ ರಕ್ಷಣೆಗೆ ಸರ್ಕಾರದ ಜತೆ ಸಾರ್ವಜನಿಕರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕ್ಷೀರ ಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ಹಾಲು ನೀಡುವ ಯೋಜನೆ ಜಾರಿಗೆ ತರಲಾಗಿದ್ದು, ಈ ಯೋಜನೆಯನ್ನು ರಾಜ್ಯದ ಎಲ್ಲಾ ಕೇಂದ್ರಗಳಿಗೂ ವಿಸ್ತರಿಸಲು ಕ್ರಮಕೈಗೊಳ್ಳಲಾಗಿದೆ. ಅಪೌಷ್ಠಿಕತೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ.

ಯಶಸ್ವಿನಿ ಯೋಜನೆ ವಿಸ್ತರಿಸಲಾಗಿದೆ. ಅಲ್ಲದೇ ಕಬ್ಬು ಬೆಳೆಗಾರರಿಗೆ ಹಣ ಪಾವತಿ ಮಾಡದ ಕಾರ್ಖಾನೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಮಣ್ಣು ಪರೀಕ್ಷೆಗಾಗಿ ಕೆ-ಕಿಸಾನ್ ಪಾಸುಬುಕ್ ವಿತರಿಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿಯೇ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದರು.

ಕೃಷಿ ಯಂತ್ರೋಪಕರಣಗಳ ಬಾಡಿಗೆ ಆಧಾರಿತ ಸೇವಾ ಕೇಂದ್ರ ನಮ್ಮ ಸರ್ಕಾರದ ವಿನೂತನ ಯೋಜನೆ. ಇದರಡಿಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶದ ರೈತರಿಗೆ ಸಕಾಲದಲ್ಲಿ ಮತ್ತು ಕಡಿಮೆ ಬಾಡಿಗೆ ದರದಲ್ಲಿ ಭೂಮಿ ಸಿದ್ಧತೆ, ಬಿತ್ತನೆ ಹಾಗೂ ನಾಟಿ ಮಾಡುವ ಉಪಕರಣಗಳು, ಕೊಯ್ಲು ಮತ್ತು ಸಂಸ್ಕರಣೆಗೆ ಉಪಯುಕ್ತವಾಗಿರುವ ವಿವಿಧ ಕೃಷಿ ಯಂತ್ರೋಪಕರಣಗಳನ್ನು ಒದಗಿಸಲು 186 ಹೋಬಳಿಗಳಲ್ಲಿ ಚಾರಿಟಬಲ್ ಟ್ರಸ್ಟ್, ಸರ್ಕಾರೇತರ ಸಂಸ್ಥೆಗಳ ಮೂಲಕ ಬಾಡಿಗೆ ಆಧಾರಿತ ಸೇವಾ ಕೇಂದ್ರಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಕೃಷಿಕರು ಮತ್ತು ಕೃಷಿಕರ ಮಕ್ಕಳಿಗೆ ಕೃಷಿ ವಿಜ್ಞಾನದಲ್ಲಿ ಪದವಿ ಹಾಗೂ ಕೃಷಿ ಡಿಪ್ಲೋಮಾ ತರಗತಿಗಳಲ್ಲಿ ಮೀಸಲಾತಿ ನೀಡಲು ನಿರ್ಧರಿಸಲಾಗಿದೆ.

ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಹಾಗೂ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸುವ ಕೃಷಿ ಬೆಲೆ ಆಯೋಗ ರಚನೆ ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದು. ಇದಕ್ಕೆ ತ್ವರಿತಗತಿಯಲ್ಲಿ ಚಾಲನೆ ನೀಡಲಾಗಿದೆ. ಹಿರಿಯ ಕೃಷಿ ತಜ್ಞ ಡಾ: ಪ್ರಕಾಶ್ ಕಮ್ಮರಡಿ ಅವರನ್ನು ಈ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇದಲ್ಲದೆ, 571 ಹೋಬಳಿಗಳಲ್ಲಿ 57,100 ಹೆಕ್ಟೇರ್ ಪ್ರದೇಶಗಳಲ್ಲಿ ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಲು ಸಾವಯವ ಭಾಗ್ಯ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಸುಮಾರು 53,000 ರೈತರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದರು.

ವಾಣಿಜ್ಯ ಬ್ಯಾಂಕ್‌ಗಳು ಹಾಗೂ ಪ್ರಾದೇಶಿಕ ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳ ಮೂಲಕ ಗರಿಷ್ಠ ಮೊತ್ತ ಒಂದು ಲಕ್ಷ ರೂ. ವರೆಗೆ ಅಲ್ಪಾವಧಿ ಬೆಳೆ ಸಾಲ ಪಡೆದು, ನಿಗದಿತ ಅವಧಿಯೊಳಗೆ ಸಾಲ ಮರು ಪಾವತಿ ಮಾಡಿದ ರೈತರಿಗೆ ರಾಜ್ಯ ಸರ್ಕಾರ ಬಡ್ಡಿಯಲ್ಲಿ ಶೇಕಡಾ ಒಂದರಷ್ಟು ರಿಯಾಯಿತಿ ನೀಡುತ್ತಿದೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದ ಕೃಷಿ ವಿದ್ಯಾರ್ಥಿಗಳಿಗೆ ಕೃಷಿ ಡಿಪ್ಲೋಮಾದಲ್ಲಿ ಮೀಸಲಾತಿ ನೀಡಲಾಗುವುದು. ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಜನರಿಕ್ ಕೇಂದ್ರ ಸ್ಥಾಪಿಸಲಾಗುವುದು. ನೂತನ ವೈದ್ಯಕೀಯ ಕಾಲೇಜುಗಳ ಸ್ಥಾಪನೆ ಮಾಡಲಾಗುವುದು ಎಂದು ಭರವಸೆ ನಿಡಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited