Untitled Document
Sign Up | Login    
Dynamic website and Portals
  
August 15, 2014

ಬಿಜೆಪಿ ಗೆಲುವಿಗೆ ಕಾಂಗ್ರೆಸ್ ಕೊಡುಗೆ ಅಪಾರ- ಅಡ್ವಾಣಿ

ಎಲ್.ಕೆ ಅಡ್ವಾಣಿ ಎಲ್.ಕೆ ಅಡ್ವಾಣಿ

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ವಿಪಕ್ಷ ಕಾಂಗ್ರೆಸ್ ಅಪಾರ ಕೊಡುಗೆ ನೀಡಿದೆ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಆ.15ರಂದು ಹೇಳಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಹಾಗೂ ತಪ್ಪುಗಳೇ ಬಿಜೆಪಿ ಗೆಲುವಿಗೆ ಪ್ರಮುಖ ಕಾರಣ ಎಂದು ಅಡ್ವಾಣಿ ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿಗೆ ದೊರೆತಿರುವ ಅಭೂತಪೂರ್ವ ಗೆಲುವಿನಲ್ಲಿ ಪಕ್ಷದ ಕಾರ್ಯಕರ್ತರದ್ದೂ ಪಾಲಿದೆ, 1952ರಿಂದ 2014ರ ಚುನಾವಣೆ ವರೆಗೂ ನಾನು ಎಲ್ಲಾ ಚುನಾವಣೆಗಳನ್ನೂ ನೋಡಿದ್ದೇನೆ, 2014ರ ಚುನಾವಣೆ, ಬಿಜೆಪಿ ಪಾಲಿಗೆ ಅಭೂತಪೂರ್ವ ಗೆಲುವು ಎಂಬುದನ್ನು ಒಪ್ಪಲೇಬೇಕು, ಇದರಲ್ಲಿ ಪಕ್ಷದ ಕಾರ್ಯಕರ್ತರ ಶ್ರಮವೂ ಅಡಗಿದೆ. ಆದರೆ ಈ ಗೆಲುವಿಗೆ ಅಪಾರ ಪ್ರಮಾಣದ ಕೊಡುಗೆ ನೀಡಿರುವುದು ಕಾಂಗ್ರೆಸ್ ನ ವೈಫಲ್ಯಗಳೆಂಬುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಅಡ್ವಾಣಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಂದರ್ಭದಲ್ಲಿ ಅಡ್ವಾಣಿ ಈ ಹೇಳಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಧ್ಯಕ್ಷ ರಾಹುಲ್ ಗಾಂಧಿ ಕಾರಣರಲ್ಲ ಎಂದು ಮಾಜಿ ಸಚಿವ ಎ.ಕೆ.ಆಂಟನಿ ಹೇಳಿಕೆ ಒಂದೆಡೆಯಾದರೆ, ಮತ್ತೊಂದೆಡೆ ಅಡ್ವಾಣಿ ನೀಡಿರುವ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited