Untitled Document
Sign Up | Login    
Dynamic website and Portals
  
August 16, 2014

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಬಿ.ಎಸ್.ಯಡಿಯೂರಪ್ಪ ಆಯ್ಕೆ

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ

ಬಿ.ಎಸ್.ಯಡಿಯೂರಪ್ಪ ಬಿ.ಎಸ್.ಯಡಿಯೂರಪ್ಪ

ನವದೆಹಲಿ : ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪನವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಬಿ.ಎಸ್.ಯಡಿಯೂರಪ್ಪ ಅವರನ್ನು ನೇಮಕಮಾಡಲಾಗಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಆರ್.ಎಸ್.ಎಸ್ ಮುಖಂಡ ರಾಮ್ ಮಾಧವ್ ಅವರನ್ನು ಆಯ್ಕೆ ಮಾಡಲಾಗಿದೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಅನಂತ್ ಕುಮಾರ್, ಕೇಂದ್ರ ಸಚಿವರಾದ ಹಿನ್ನಲೆಯಲ್ಲಿ ತೆರವಾದ ಸ್ಥಾನಕ್ಕೆ ಕರ್ನಾಟಕದವರನ್ನೇ ಆಯ್ಕೆ ಮಾಡಲು ಕೇಂದ್ರ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿತ್ತು. ಆದರೆ ಆರ್.ಎಸ್.ಎಸ್ ವಕ್ತಾರ ರಾಮ್ ಮಾಧವ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕಮಾಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರಿಗೆ ಬಿಜೆಪಿ ಉಪಾಧ್ಯಕ್ಷ ಸ್ಥಾನ ನೀಡಲಾಗಿದ್ದು, ಇನ್ನುಮುಂದೆ ಬಿ.ಎಸ್.ವೈ ರಾಷ್ಟ್ರ ರಾಜಕಾರಣದಲ್ಲಿ ಮಿಂಚಲಿದ್ದಾರೆ. ಕರ್ನಾಟಕದವರೇ ಆದ ಸಂತೋಷ್ ಹಾಗೂ ವಿ.ಸತೀಶ್ ಅವರನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳ ಹುದ್ದೆಗೆ ನೇಮಕ ಮಾಡಲಾಗಿದೆ.

ಒಟ್ಟು 11 ರಾಷ್ಟ್ರೀಯ ಉಪಾಧ್ಯಕ್ಷರನ್ನು, 8 ಪ್ರಧಾನ ಕಾರ್ಯದರ್ಶಿಗಳನ್ನು, 14 ಕಾರ್ಯದರ್ಶಿಗಳನ್ನು, 10 ವಕ್ತಾರರನ್ನು, 4 ಜಂಟಿ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದ್ದು, ಪಟ್ಟಿ ಬಿಡುಗಡೆ ಮಾಡಲಾಗಿದೆ. ನೆಹರು ಕುಟುಂಬದ ಕುಡಿ ಯುವ ನಾಯಕ ವರುಣ್ ಗಾಂಧಿಗೆ ಯಾವುದೇ ಸ್ಥಾನ ನೀಡದೇ ಕೋಕ್ ನೀಡಲಾಗಿದೆ. ಹಲವು ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಬಿಜೆಪಿ ಈ ಪಟ್ಟಿ ಸಿದ್ಧಪಡಿಸಿದ್ದು, ಹಿರಿಯ ನಾಯಕರಿಗೆ ಸ್ಥಾನ ನೀಡಿರುವುದು ವಿಶೇಷವಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited