Untitled Document
Sign Up | Login    
Dynamic website and Portals
  
August 16, 2014

ಕೆಪಿಎಸ್ ಸಿ ನೇಮಕಾತಿ ರದ್ದು: ಕಾನೂನು ಹೋರಾಟಕ್ಕೆ ಸಜ್ಜು

ಹೆಚ್.ಡಿ.ಕುಮಾರಸ್ವಾಮಿ ಹೆಚ್.ಡಿ.ಕುಮಾರಸ್ವಾಮಿ

BW News Bureau : 2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ನೇಮಕಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಎಲ್ಲಾ ರೀತಿಯಲ್ಲೂ ಸಜ್ಜಾಗಿದ್ದು, ಆ.18ರಿಂದ ಕಾನೂನು ಹೋರಾಟ ಆರಂಭವಾಗಲಿದೆ ಎಂದರು.

ಆ.20ರಂದು ನೇಮಕಾತಿ ರದ್ದು ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು. ಈ ರ್ಯಾಲಿಗೆ ಕನ್ನಡ ಪರ ಸಂಘಟನೆ, ದಲಿತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಲಿವೆ. ಆ.21ರಿಂದ ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಕೈಬಿಡಲಾಗುವುದು ಎಂದರು.

ಕೆಪಿಎಸ್ ಸಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ನಡೆಸಲು ಉದ್ದೇಶಿಸಿರುವ ಕಾನೂನು ಹೋರಾಟದಲ್ಲಿ ಜಯಗಳಿಸುವ ವಿಶ್ವಾಸ ನಮಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited