Untitled Document
Sign Up | Login    
Dynamic website and Portals
  
August 16, 2014

ಕೆಪಿಎಸ್ ಸಿ ನೇಮಕಾತಿ ವಿವಾದ: ಶೀಘ್ರದಲ್ಲಿಯೇ ಹೊಸ ಅಧಿಸೂಚನೆ

ಬೆಂಗಳೂರು : ಕೆಪಿಎಸ್ ಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, 10 ದಿನಗಳಲ್ಲಿ ಕೆಪಿಎಸ್ ಸಿ ನೇಮಕಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಲಿದೆ ಎಂದರು.

ಕೆಪಿಎಸ್ ಸಿ ಖಾಲಿ ಹುದ್ದೆಗಳ ಸಂಖ್ಯೆಯನ್ನೂ ಹೆಚ್ಚಿಸಲಾಗುವುದು. ಹಾಲಿ ಇರುವ 362 ಹುದ್ದೆಗಳನ್ನು 600ಕ್ಕೆ ಹೆಚ್ಚಳ ಮಾಡುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಇದೇ ವೇಳೆ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣದ ತನಿಖೆಗೆ ರಾಜ್ಯ ಸರ್ಕಾರ ಏಕವ್ಯಕ್ತಿ ನ್ಯಾಯಾಂಗ ಆಯೋಗ ರಚನೆ ಮಾಡಿದ್ದು, ನಿವೃತ್ತ ನ್ಯಾ.ಕೆಂಪಣ್ಣ ಅವರನ್ನು ನೇಮಕ ಮಾಡಲಾಗಿದೆ ಎಂದರು.

ಡಿನೋಟಿಫಿಕೇಷನ್ ಕುರಿತಾಗಿ ಏಕವ್ಯಕ್ತಿ ನ್ಯಾಯಾಂಗ ಆಯೋಗ ತನಿಖೆ ನಡೆಸಿ, 6 ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ವಿವರಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited