Untitled Document
Sign Up | Login    
Dynamic website and Portals
  
August 18, 2014

ಮನೆಗಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ

Yeshwanthpur : ಕುಖ್ಯಾತ ನಾಲ್ವರು ಮನೆಗಳ್ಳರನ್ನು ಆ.18ರಂದು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಮನೆಗಳ್ಳತನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಎಚ್ಚೆತ್ತುಕೊಂಡು ಕಾರ್ಯಾಚರಣೆ ನಡೆಸಿದ್ದು ನಾಲ್ವರು ಮನೆಗಳ್ಳರನ್ನು ಬಂಧಿಸಿದ್ದಾರೆ.

ಬಂಧಿತರನ್ನು ರಾಮ್ ಅಲಿಯಾಸ್ ಪಕ್ಕಾ, ಮಹಾರಾಜ್, ಗಣೇಶ್ ಮತ್ತು ಇಲಿಯಾಸ್ ಎಂದು ಗುರುತಿಸಲಾಗಿದೆ. ಚಿಂದಿ ಆಯುವ ನೆಪದಲ್ಲಿ ಅಡ್ಡಾಡುತ್ತಿದ್ದ ಮನೆಗಳ್ಳರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ನಡೆಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮನೆಗಳ್ಳತನ ಮಿತಿ ಮೀರುತ್ತಿರುವುದರ ಬಗ್ಗೆ ಕೆಂಗೇರಿ ಸೇರಿ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಗಳು 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ.

ಆರೋಪಿಗಳಿಂದ 150 ಗ್ರಾಂ ಚಿನ್ನಾಭರಣ, 2.5 ಕೆ.ಜಿ ಬೆಳ್ಳಿ ಮತ್ತು 5 ಲಕ್ಷ ನಗದು ವಶ ಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು ನಗರದಲ್ಲಿ ನಡೆಯುತ್ತಿರುವ ಮನೆಗಳ್ಳತನದ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯುವ ನಿರೀಕ್ಷೆ ಇದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited