ನವದೆಹಲಿ : 2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಧಿಸಿದಂತೆ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಪತ್ನಿ ದಯಾಳು ಅಮ್ಮಾಳ್ ಅವರಿಗೆ ಜಾಮೀನು ನೀಡಲಾಗಿದೆ.
ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಒ.ಪಿ ಸೈನಿ, ಅನಾರೋಗ್ಯ ಹಿನ್ನಲೆಯಲ್ಲಿ ದಯಾಳು ಅಮ್ಮಾಳ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. 5 ಲಕ್ಷ ರೂ ವಯಕ್ತಿಕ ಬಾಂಡ್ ಹಾಗೂ ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಲಾಗಿದೆ.
ಸ್ವಾನ್ ಟೆಲಿಕಾಂ ಸಂಸ್ಥೆ, ಡಿಎಂಕೆ ಒಡೆತನದಲ್ಲಿರುವ ಕಲೈನಾರ್ ಚಾನಲ್ ಗೆ ಅಕ್ರಮವಾಗಿ 200 ಕೋಟಿ ನೀಡಿದೆ. ಇದರಲ್ಲಿ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಪತ್ನಿ ದಯಾಳು ಅಮ್ಮಾಳ್ ಶೇ.60ರಷ್ಟು ಪಾಲು ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಹಗರಣದಲ್ಲಿ ಪುತ್ರಿ ಕನಿಮೋಳಿ, ಮಾಜಿ ಕೇಂದ್ರ ಸಚಿವ ಎ.ರಾಜಾ ಹಾಗೂ ಹಲವರ ಹೆಸರು ಹೆಸರು ಕೂಡ ಕೇಳಿಬಂದ ಹಿನ್ನಲೆಯಲ್ಲಿ ತನಿಖೆ ಕೈಗೊಂಡ ಜಾರಿ ನಿರ್ದೇಶನಾಲಯ ಒಟ್ಟು19 ಆರೋಪಿಗಳ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿತ್ತು.