Untitled Document
Sign Up | Login    
Dynamic website and Portals
  
August 20, 2014

ಸ್ಪೀಕರ್ ಆರೋಪಕ್ಕೆ ಪ್ರತಿಕ್ರಿಯಿಸಲು ಸಿದ್ದರಾಮಯ್ಯ ನಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯಸರ್ಕಾರದ ಕಾರ್ಯನಿರ್ವಹಣೆ ಬಗ್ಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿರುವುದರ ಬಗ್ಗೆ ಪ್ರತಿಕ್ರಿಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಗೋಡು ತಿಮ್ಮಪ್ಪ, ಹಿಂದಿನ ಸರ್ಕಾರಕ್ಕೂ ಈ ಸರ್ಕಾರಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ವಿಧಾನಸೌಧದಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಲು ನಿರಾಕರಿಸಿದ್ದಾರೆ.

ರಾಜ್ಯ ಸರ್ಕಾರ ಕ್ರಿಯಾಶೀಲವಾಗಿದೆ, ಪಾದರ್ಶಕ ಆಡಳಿತ ನೀಡುತ್ತಿದೆ ಎಂದಷ್ಟೇ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಕಾಗೋಡು ತಿಮ್ಮಪ್ಪ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗ ಜನ ಕಣ್ಣಿಗೆ ಎದ್ದು ಕಾಣುವಂಥ ಕಾರ್ಯಕ್ರಮಗಳನ್ನು ನೀಡಬೇಕು.ಆದರೆ ಸರ್ಕಾರ ಇದ್ಯಾವ ಕೆಲಸವನ್ನೂ ಮಾಡುತ್ತಿಲ್ಲ. ಕೊಟ್ಟ ಮಾತಿನಂತೆ ನಡೆಯದ ಹೊಸ ಸರ್ಕಾರ ಏಕೆ ಬೇಕು? ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಮುಖ್ಯಮಂತ್ರಿ ಬಜೆಟ್ ಭಾಷಣದಲ್ಲಿ 'ಸರ್ವರಿಗೂ ಆರೋಗ್ಯ' ಭರವಸೆ ನೀಡಿದ್ದಾರೆ. ಆದರೆ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳಲ್ಲಿ ವೈದ್ಯರೇ ಇಲ್ಲ. ಇನ್ನು ಎಲ್ಲರಿಗೂ ಆರೋಗ್ಯ ಕೊಡಲು ಹೇಗೆ ಸಾಧ್ಯ? ನಾನು ಈ ಬಗ್ಗೆ ಮುಖ್ಯಮಂತ್ರಿಗೆ ಬರೆದ ಪತ್ರಕ್ಕೆ ಸೂಕ್ತ ಉತ್ತರ ಲಭಿಸಿಲ್ಲ ಎಂದು ಸ್ಪೀಕರ್ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಈ ಎಲ್ಲಾ ಆರೋಪಗಳಿಗೆ ಉತ್ತರಿಸಲು ಸಿ.ಎಂ ನಿರಾಕರಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited