Untitled Document
Sign Up | Login    
Dynamic website and Portals
  
August 20, 2014

ಬಳ್ಳಾರಿಯಲ್ಲಿ ಸಚಿವ ಸಂಪುಟ ಸಭೆ: ಡಿ.ಕೆ.ಶಿವಕುಮಾರ್

ಬಳ್ಳಾರಿ : ಜನರ ಕಷ್ಟಗಳಿಗೆ ಸ್ಪಂದಿಸುವ ಸಲುವಾಗಿ ಬಳ್ಳಾರಿಯಲ್ಲಿ ಸಚಿವ ಸಂಪುಟ ಸಭೆ ನಡೆಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಭಾಗದ ಜನರು ಬಹುದಿನಗಳಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಚಿವ ಸಂಪುಟ ಸಭೆ ನಡೆಸುವುದಾಗಿ ತಿಳಿಸಿದರು.

ರಾಜ್ಯ ಸರ್ಕಾರ ಅಭಿವೃದ್ಧಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದೆ. ಜನರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಲೆಯಿದ್ದು, ಉಪಚುನಾವಣೆ ಮುಗಿದ 15 ದಿನಗಳಲ್ಲಿ ತಾವು ಬಳ್ಳಾರಿಗೆ ಮತ್ತೊಮ್ಮೆ ಭೇಟಿ ನೀಡಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ರಾಜ್ಯ ಸರ್ಕಾರದ ಜನಪರ ಆಡಳಿತದಿಂದಾಗಿ ಆ.21ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಲಿದ್ದು, ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited