Untitled Document
Sign Up | Login    
Dynamic website and Portals
  
August 21, 2014

ಉಪಚುನಾವಣೆ ಮತದಾನ ಆರಂಭ

ಬೆಂಗಳೂರು : ಬಳ್ಳಾರಿ ಗ್ರಾಮೀಣ, ಚಿಕ್ಕೋಡಿ-ಸದಲಗಾ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಮತದಾನ ಆರಂಭವಾಗಿದೆ.

ಬೆಳಿಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಕ್ಷೇತ್ರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮೂರೂ ಕ್ಷೇತ್ರಗಳನ್ನು ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದು, ಬಳ್ಳಾರಿಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಓಬಳೇಶ್, ಕಾಂಗ್ರೆಸ್ ನಿಂದ ಎನ್.ವೈ ಗೋಪಾಲಕೃಷ್ಣ ಹಾಗೂ ಮೂವರು ಇತರರು ಸೇರಿ ಒಟ್ಟು 5 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಶಿಕಾರಿಪುರದಲ್ಲಿ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ನಿಂದ ಶಾಂತವೀರಪ್ಪಗೌಡ ಹಾಗೂ ಇತರರು 6 ಜನ ಸೇರಿ ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಹಾಂತೇಶ ಕಟವಟಗಿಮಠ, ಕಾಂಗ್ರೆಸ್ ನಿಂದ ಗಣೇಶ ಹುಕ್ಕೇರಿ ಹಾಗೂ 7 ಇತರರು ಸೇರಿ ಒಟ್ಟು 9 ಜನರು ಕಣದಲ್ಲಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited