Untitled Document
Sign Up | Login    
Dynamic website and Portals
  
August 21, 2014

ಮತಗಟ್ಟೆ ಸ್ಥಾಪನೆಗೆ ಆಗ್ರಹ: ಮತದಾನ ಬಹಿಷ್ಕಾರ

ಶಿವಮೊಗ್ಗ : ಮತಗಟ್ಟೆ ಸ್ಥಾಪನೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ.

ಬಳ್ಳಾರಿ ಗ್ರಾಮೀಣ, ಚಿಕ್ಕೋಡಿ-ಸದಲಗಾ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಮತದಾನ ಆರಂಭವಾಗಿದೆ. ಆದರೆ ಶಿಕಾರಿಪುರ ಕ್ಷೇತ್ರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಗ್ರಾಮದಲ್ಲಿ ಮತಗಟ್ಟೆ ಸ್ಥಾಪಿಸುವಂತೆ 3-4 ವರ್ಷಗಳಿಂದ ಬೇಡಿಕೆಯಿಟ್ಟಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ. ಹಾಗಾಗಿ ಈ ಬಾರಿ ಉಪಚುನಾವಣೆಯಲ್ಲಿ ಮತಚಲಾಯಿಸದೇ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಈ ಗ್ರಾಮದಲ್ಲಿ 380 ಮತದಾರರಿದ್ದು, ಗ್ರಾಮದಿಂದ 3 ಕಿ.ಮೀ ದೂರದಲ್ಲಿರುವ ಬೆಳ್ಳಿಗಾವೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಆದರೆ ಮಾಳಗೊಂಡಕೊಪ್ಪದ ಗ್ರಾಮಸ್ಥರಿಗೆ ಈ ಮತಗಟ್ಟೆ ತುಂಬಾ ದೂರವಿರುವ ಹಿನ್ನಲೆಯಲ್ಲಿ ಗ್ರಾಮದಲ್ಲಿಯೇ ಮತಗಟ್ಟೆ ಸ್ಥಾಪಿಸುವಂತೆ ಒತಾಯಿಸುತ್ತಿದ್ದಾರೆ.

ಇತ್ತೀಚಿನ ಮಾಹಿತಿ ಪ್ರಕಾರ ಗ್ರಾಮಸ್ಥರನ್ನು ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ಭೇಟಿ ನೀಡಿದ್ದು, ಗ್ರಾಮಸ್ಥರ ಮನವೊಲಿಕೆಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited