Untitled Document
Sign Up | Login    
Dynamic website and Portals
  
August 21, 2014

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಕೈಸೇರಬೇಕಿದ್ದ ಶಸ್ತ್ರಾಸ್ತ್ರ ವಶ

ನವದೆಹಲಿ : 'ಸೇನಾ ಸಿಬ್ಬಂದಿ' ನಡೆಸಿದ ಮಹತ್ವಕ ಕಾರ್ಯಾಚರಣೆಯೊಂದರಲ್ಲಿ ಜಮ್ಮು-ಕಾಶ್ಮೀರದ ಬಂಡೀಪೋರದಲ್ಲಿ ಉಗ್ರರಿಗೆ ಸರಬರಾಜಾಗಬೇಕಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಏಳು ಎ.ಕೆ 47 ರೈಫಲ್ಸ್, ಐದು ಪಿಸ್ತೂಲ್, ಒಂದು ಯುಬಿಜಿಎಲ್(under barrel grenade launcher), 21 ಹ್ಯಾಂಡ್ ಗ್ರೆನೇಡ್, ನೂರಾರು ಜೀವಂತ ಬುಲೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನಾಪಡೆ ತಿಳಿಸಿದೆ.

ಉತ್ತರ ಕಾಶ್ಮೀರದ ಬಂಡೀಪೋರ ಜಿಲ್ಲೆಯಲ್ಲಿ ತೆರಳುತ್ತಿದ್ದ ಕಾರ್ ನಲ್ಲಿ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ಸಾಗಿಸಲಾಗುತ್ತಿತ್ತು. ಶಸ್ತ್ರಾಸ್ತ್ರಗಳನ್ನು ವಶಕ್ಕೆಪಡೆದ ನಂತರ ಸಾಗಣೆ ಮಾಡುತ್ತಿದ್ದವರನ್ನು ವಿಚಾರಣೆ ಮಾಡಿದ ಸಂದರ್ಭದಲ್ಲಿ ಉಗ್ರರಿಗೆ ಈ ಶಸ್ತ್ರಾಸ್ತ್ರಗಳನ್ನು ರವಾನಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಈ ಕಾರ್ಯಾಚರಣೆ ಮೂಲಕ ಪ್ರಮುಖ ದುರಂತವೊಂದನ್ನು ತಪ್ಪಿಸಿದಂತಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿಧ್ವಂಸಕ ಕೃತ್ಯ ಎಲ್ಲೆಮೀರಿದ್ದು ಆ.20ರಂದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited