Untitled Document
Sign Up | Login    
Dynamic website and Portals
  
August 22, 2014

ಸಾಹಿತಿ ಅನಂತ ಮೂರ್ತಿ ಆರೋಗ್ಯದಲ್ಲಿ ತೀವ್ರ ಏರುಪೇರು: ಐ.ಸಿ.ಯು ನಲ್ಲಿ ದಾಖಲು

ಸಾಹಿತಿ ಯು.ಆರ್ ಅನಂತ ಮೂರ್ತಿ  (ಸಂಗ್ರಹ ಚಿತ್ರ) ಸಾಹಿತಿ ಯು.ಆರ್ ಅನಂತ ಮೂರ್ತಿ (ಸಂಗ್ರಹ ಚಿತ್ರ)

ಬೆಂಗಳೂರು : 'ಜ್ನಾನಪೀಠ' ಪ್ರಶಸ್ತಿ ಪುರಸ್ಕೃತರಾದ ಯು.ಆರ್.ಅನಂತ ಮೂರ್ತಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐ.ಸಿ.ಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಂತ ಮೂರ್ತಿ ಅವರು ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಕಳೆದ 2-3 ದಿನಗಳಿಂದ ಅನಂತ ಮೂರ್ತಿ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿರುವ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಯ ಐ.ಸಿ.ಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅನಂತಮೂರ್ತಿ ಅವರ ಅರೋಗ್ಯ ಗಂಭೀರವಾಗಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ ಎಂದು ಖಾಸಗಿ ಮಾಧ್ಯಮ ವರದಿ ಮಾಡಿದೆ. ಅನಂತ ಮೂರ್ತಿ ಅವರಿಗೆ ವೆಂಟಿಲೆಟರ್ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅನಂತ ಮೂರ್ತಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಾರಕ್ಕೊಮ್ಮೆ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಮಣಿಪಾಲ್ ವೈದ್ಯರು ತಿಳಿಸಿದ್ದಾರೆ.

 

 

Share this page : 
 

More News From : Art & Culture

ಅರಮನೆ ನಗರಿಯಲ್ಲಿ ಕಳೆಕಟ್ಟಿದ ಜಂಬೂಸವಾರಿ ಮೆರವಣಿಗೆ: ಮನಸೂರೆಗೊಳ್ಳುತ್ತಿದೆ ಸಾಂಸ್ಕೃತಿಕ ಕಲಾತಂಡಗಳ ವೈಭವ
  • ಅರಮನೆ ನಗರಿಯಲ್ಲಿ ಕಳೆಕಟ್ಟಿದ ಜಂಬೂಸವಾರಿ ಮೆರವಣಿಗೆ: ಮನಸೂರೆಗೊಳ್ಳುತ್ತಿದೆ ಸಾಂಸ್ಕೃತಿಕ ಕಲಾತಂಡಗಳ ವೈಭವ
  • ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ವೈಭವದ ಚಾಲನೆ ದೊರೆತಿದ್ದು, ಅರಮನೆ ನಗರಿಯಲ್ಲಿ ರಾಜ ಗಾಂಭೀರ್ಯದಿಂದ ಸಾಗುತ್ತಿರುವ ಗಜೆಪಡೆಗಳು, ಸಾಂಸ್ಕೃತಿಕ ಕಲಾತಂಡಗಳು, ಚಿತ್ತಾಕರ್ಷಕ ಸ್ತಬ್ದಚಿತ್ರಗಳು ಕಣ್ಮನಸೆಳೆಯುತ್ತಿವೆ.
  • ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ
  • ಯಕ್ಷಗಾನ ಮಾಹಿತಿಗಾಗಿ ಮೊಬೈಲ್ ಆಪ್!!!
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited