ನವದೆಹಲಿ : ರಾಜ್ಯಪಾಲರ ಹುದ್ದೆ ತ್ಯಜಿಸುವಂತೆ ಕೇಂದ್ರ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಉತ್ತಾರಖಂಡ ರಾಜ್ಯಪಾಲ ಅಜೀಜ್ ಖುರೇಷಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಖುರೇಷಿಯವರಿಗೆ ಪದಚ್ಯುತಗೊಳಿಸುವ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಖುರೇಷಿಯವರಿಗೆ ಹುದ್ದೆ ತ್ಯಜಿಸುವಂತೆ ಒತ್ತಡ ಹಾಕಿಲ್ಲ .ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಸೂಕ್ತ ಪ್ರತಿಕ್ರಿಯೆ ನೀಡುವುದಾಗಿ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ರಾಜ್ಯಪಾಲ ಅಜೀಜ್ ಖುರೇಷಿಯವರು ಕೇಂದ್ರ ಸರ್ಕಾರ ರಾಜಕೀಯವಾಗಿ, ಆಡಳಿತಾತ್ಮಕವಾಗಿ ಹುದ್ದೆ ತ್ಯಜಿಸುವಂತೆ ಒತ್ತಡಹಾಕುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಮೊರೆಹೋಗಿದ್ದರು.
ಈ ಅರ್ಜಿಯನ್ನು ಪಂಚ ಸದಸ್ಯ ಸಂವಿಧಾನಿಕ ಪೀಠಕ್ಕೆ ಸುಪ್ರೀಂ ಕೋರ್ಟ್ ವರ್ಗಾಯಿಸಿತ್ತು. ಅಲ್ಲದೇ ಈ ಸಂಬಂಧ 6 ವಾರಗಳಲ್ಲಿ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.