Untitled Document
Sign Up | Login    
Dynamic website and Portals
  
August 24, 2014

ಶಿಕ್ಷಕರ ದಿನಾಚರಣೆಯಂದು ವಿದ್ಯಾರ್ಥಿಗಳು, ಶಿಕ್ಷಕರ ಜತೆ ಪ್ರಧಾನಿ ಸಂವಾದ

ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಸೆ.5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಅಂದು ಪ್ರಧಾನಿ ನರೇಂದ್ರ ಮೋದಿ ಮಕ್ಕಳು ಹಾಗೂ ಶಿಕ್ಷಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

ಅತ್ಯುತ್ತಮ ಶಿಕ್ಷಕರ ಆಯ್ಕೆಯಲ್ಲಿ ಸ್ವತ: ಪ್ರಧಾನಿ ಮೋದಿಯವರೇ ಆಸಕ್ತಿಹೊಂದಿದ್ದು, ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಶಸ್ತಿ ಗಳಿಸಿದ ಶಿಕ್ಷಕರ ಜತೆ ಪ್ರಧಾನಿ ಚಹಾ ಕೂಟ ನಡೆಸಲು ಮುಂದಾಗಿದ್ದಾರೆ.

ಬಳಿಕ ಪ್ರಧಾನಿ ಮೋದಿ ದೇಶಾದ್ಯಂತ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಶಾಲೆಗಳ ಆಯ್ಕೆ ಹಾಗೂ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತರಲು ಮುಂದಾಗಿರುವ ಮೋದಿ, ಪ್ರಾಥಮಿಕ ಶಿಕ್ಷಣದ ಸಮಸ್ಯೆಗಳು ಮತ್ತು ಅಗತ್ಯಗಳ ಬಗ್ಗೆ ಶಿಕ್ಷಕರ ಜತೆ ನೇರ ಸಂವಾದದ ಮೂಲಕ ತಿಳಿಯಲು ಯತ್ನಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited