ಮುಂಬೈ : ಮಹಾರಾಷ್ಟ್ರ ರಾಜ್ಯಪಾಲ ಶಂಕರ್ ನಾರಾಯಣನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಿಜೋರಾಂಗೆ ವರ್ಗಾವಣೆ ಮಾಡಿದ್ದಕ್ಕೆ ಬೇಸರಗೊಂಡು ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ಭವನಕ್ಕೆ ರವಾನಿಸಿರುವ ಶಂಕರ್ ನಾರಾಯಣನ್, ತಮ್ಮನ್ನು ಮಿಜೋರಾಂ ಗೆ ವರ್ಗಾವಣೆ ಮಾಡಿರುವುದಕ್ಕೆ ಬೇಸರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ನೇನಕಗೊಂಡ ರಾಜ್ಯಪಾಲರನ್ನು ವರ್ಗಾವಣೆ ಮಾಡಿತ್ತು. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಶಂಕರ್ ನಾರಾಯಣನ್ ಅವರನ್ನು ಮಿಜೋರಾಂ ಗೆ ವರ್ಗಾವಣೆ ಮಾಡಲಾಗಿತ್ತು.