Untitled Document
Sign Up | Login    
Dynamic website and Portals
  
August 25, 2014

ಉಪಚುನಾವಣೆ: ಬಿಹಾರ ಬಿಜೆಪಿಗೆ ಸವಾಲೊಡ್ಡಿದ ನಿತೀಶ್ ಕುಮಾರ್ ಮೈತ್ರಿಕೂಟ

ಪಾಟ್ನಾ : 'ಬಿಹಾರ' ಉಪಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿಗೆ ಸೆಡ್ಡುಹೊಡೆದಿರುವ ಆರ್.ಜೆ.ಡಿ, ಜೆಡಿಯು, ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಕಾಯ್ದುಕೊಂಡಿದೆ.

ಆ.25ರಂದು ಬಿಹಾರದ10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಇನ್ನು 5 ಕ್ಷೇತ್ರಗಳಲ್ಲಿ ನಿತೀಶ್ ಕುಮಾರ್, ಲಾಲೂ ಪ್ರಸಾದ್ ಯಾದವ್, ಕಾಂಗ್ರೆಸ್ ನ ಮೈತ್ರಿಕೂಟ ಮುನ್ನಡೆ ಸಾಧಿಸಿದೆ.

ನರ್ಕಟಿಯಾ ಗಂಜ್, ರಾಜ್ ನಗರ್(ಎಸ್.ಸಿ) ಹಾಜಿಪುರ, ಮೊಹಾನಿಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಜೆಡಿಯು ಅಭ್ಯರ್ಥಿಗಳು 2 ವಿಧಾನಸಭಾ ಕ್ಷೇತ್ರಗಳಲ್ಲಿ, ಆರ್.ಜೆ.ಡಿ ಅಭ್ಯರ್ಥಿಗಳು 3 ವಿಧಾನಸಭಾ ಕ್ಷೇತ್ರಗಳಲ್ಲಿ, ಒಂದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿಹಾರದ 10 ಶಾಸಕರು ಲೋಕಸಭೆಗೆ ಆಯ್ಕೆಯಾಗಿದ್ದ ಹಿನ್ನೆಲೆಯಲ್ಲಿ ವಿಧಾನಸಭೆಗೆ ಉಪಚುನಾವಣೆ ನಡೆದಿತ್ತು. ಬಿಜೆಪಿ ಆಡಳಿತದ ಮಧ್ಯಪ್ರದೇಶದ 3 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸಿದೆ.

ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದು ಕೈ ಅಭ್ಯರ್ಥಿ ಪ್ರಣೀತ್ ಕೌರ್ ಜಯಭೇರಿ ಭಾರಿಸಿದ್ದಾರೆ. ಉಳಿದ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಶಿರೋಮಣಿ ಅಕಾಲಿದಳದ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited