ಬಳ್ಳಾರಿ : ಬಳ್ಳಾರಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹಿನ್ನಲೆಯಲ್ಲಿ ಈ ಸೋಲಿನ ಹೊಣೆಯನ್ನು ತಾವೇ ಹೊರುವುದಾಗಿ ಸಂಸದ ಶ್ರೀರಾಮುಲು ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಣಬಲ, ತೋಳ್ಬಲಗಳಿಂದ ಗೆಲುವು ಸಾಧಿಸಿದೆ. ಜನತೆ ನೀಡಿದ ತೀರ್ಪಿಗೆ ತಲೆಬಾಗುವುದಾಗಿ ತಿಳಿಸಿದರು.
ಬಳ್ಳಾರಿ ಗ್ರಾಮಾಂತರದಲ್ಲಿ ಜನತೆ ಬದಲಾವಣೆ ಬಯಸಿ ಕಾಂಗ್ರೆಸ್ ಗೆ ಮತಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರ ಚುನಾವಣೆಯ ವೇಳೆ ನೀಡಿದ ಭರವಸೆಗಳನ್ನು ಈಡೇರಿಸಲಿ ಎಂದರು.
ನನ್ನ ಕ್ಷೇತ್ರದಲ್ಲಿ ಮಾತ್ರವಲ್ಲ, ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದ ಶ್ರೀರಾಮುಲು, ಬಳ್ಳಾರಿಯಲ್ಲಿ ಮತ್ತೆ ಪಕ್ಷ ಸಂಘಟನೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಬಿಜೆಪಿ ಆಡಳಿತ ನಡೆಸಲಿದೆ ಎಂದರು.