Untitled Document
Sign Up | Login    
Dynamic website and Portals
  
August 26, 2014

ನಾಲ್ಕು ರಾಜ್ಯಗಳಿಗೆ ರಾಜ್ಯಪಾಲರ ನೇಮಕ: ರಾಜ್ಯಕ್ಕೆ ಗುಜರಾತ್ ಸಭಾಧ್ಯಕ್ಷ ರಾಜ್ಯಪಾಲ?

ಗುಜರಾತ್  ವಿಧಾನಸಭಾಧ್ಯಕ್ಷರಾದ ವಾಜುಭಾಯ್ ವಾಲ ಗುಜರಾತ್ ವಿಧಾನಸಭಾಧ್ಯಕ್ಷರಾದ ವಾಜುಭಾಯ್ ವಾಲ

ನವದೆಹಲಿ : ಅಧಿಕಾರಾವಧಿ ಅಂತ್ಯ, ರಾಜೀನಾಮೆಗಳಿಂದ ತೆರವಾಗಿರುವ ನಾಲ್ಕು ರಾಜ್ಯಗಳ ರಾಜ್ಯಪಾಲರ ಹುದ್ದೆಗೆ ಆ.26ರಂದು ನೂತನ ರಾಜ್ಯಪಾಲರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳಿಂದ ಮಾಹಿತಿ ದೊರೆತಿದೆ.

ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳ ನೂತನ ರಾಜ್ಯಪಾಲರ ಪಟ್ಟಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ ಹಾಕುವ ಸಾಧ್ಯತೆಗಳಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಕರ್ನಾಟಕಕ್ಕೆ ಗುಜರಾತ್ ನ ವಿಧಾನಸಭಾಧ್ಯಕ್ಷರಾಗಿರುವ ವಾಜುಭಾಯ್ ರೂಡಭಾಯ್ ವಾಲ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸುವ ಸಾಧ್ಯತೆ ಇದೆ. ರಾಜಸ್ಥಾನ ರಾಜ್ಯಪಾಲರಾಗಿರುವ ಮಾರ್ಗರೇಟ್ ಆಳ್ವ ಅವರ ಅಧಿಕಾರಾವಧಿ ಮುಕ್ತಾಯಗೊಂದಿರುವ ಹಿನ್ನೆಲೆಯಲ್ಲಿ
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರನ್ನು ರಾಜಸ್ಥಾನ ರಾಜ್ಯಪಾಲರನ್ನಾಗಿ ನೇಮಿಸುವ ಸಾಧ್ಯತೆ ಇದೆ.

ಮಿಜೋರಾಂ ಗೆ ವರ್ಗಾವಣೆ ಮಾಡಿದ್ದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಶಂಕರ್ ನಾರಾಯಣನ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಮಾಜಿ ಕೇಂದ್ರ ಸಚಿವ ವಿದ್ಯಾಸಾಗರ್ ರಾವ್ ಅವರನ್ನು ನೇಮಕ ಮಾಡಲಾಗುತ್ತಿದೆ.

ಬಿಜೆಪಿ ಮಹಿಳಾ ಮೋರ್ಚ ಘಟಕದ ಮುಖಂಡರಾದ ಮೃದುಲಾ ಸಿನ್ಹಾ ಅವರು ಗೋವಾ ರಾಜ್ಯಪಾಲರಾಗುವ ಸಾಧ್ಯತೆಗಳಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಅಸ್ಥಿತ್ವಕ್ಕೆ ಬಂದ ಕೆಲವೇ ದಿನಗಳಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ರಾಜ್ಯಪಾಲರಿಗೆ ರಾಜೀನಾಮೆ ನೀಡುವಂತೆ ಸೂಚಿಸಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited