Untitled Document
Sign Up | Login    
Dynamic website and Portals
  
August 26, 2014

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವನ್ನಾದರೂ ನೀಡಿ: ಪರಮೇಶ್ವರ್

ಪರಮೇಶ್ವರ್ ಪರಮೇಶ್ವರ್

ಬೆಂಗಳೂರು : ಡಿಸಿಎಂ ಹುದ್ದೆ ಕೊಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಬೇಡಿಕೆಯಿಟ್ಟಿದ್ದಾರೆ.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆಯಲ್ಲಿ ತಮಗೆ ಡಿಸಿಎಂ ಸ್ಥಾನ ನೀಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ, ತುಮಕೂರು ಜಿಲ್ಲಾ ಉಸ್ತುವಾರಿಯನ್ನಾಗಿ ಮಾಡಿ ಎಂದು ಪರಮೇಶ್ವರ್ ಮನವಿ ಮಾಡಿದ್ದಾರೆ.

ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರಿಗೆ ಡಿಸಿಎಂ ಸ್ಥಾನ ನೀಡಿ. ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

ಟಿ.ಬಿ.ಜಯಚದ್ರ ಅವರನ್ನು ಡಿಸಿಎಂ ಆಗಿ ನೇಮಕ ಆಡುವ ಸಾಧ್ಯತೆಯಿದೆ ಎಂಬ ಮಾತು ಕೇಳಿಬರುತ್ತಿರುವ ಹಿನ್ನಲೆಯಲ್ಲಿ, ಒಂದುವೇಳೆ ತಮಗೆ ಡಿಸಿಎಂ ಹುದ್ದೆ ತಪ್ಪಿದಲ್ಲಿ ಸಚಿವ ಸ್ಥಾನವನ್ನಾದರೂ ನೀಡಲಿ. ಈ ಮೂಲಕ ತುಮಕೂರು ಉಸ್ತುವಾರಿ ವಹಿಸಿಕೊಂಡು ಜಿಲ್ಲೆಯಲ್ಲಿ ಹಿಡಿತ ಸಾಧಿಸಲು ಪರಮೇಶ್ವರ್ ಸಚಿವ ಸ್ಥಾನದ ಹೊಸ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ಸಚಿವ ಸಂಪುಟ ವಿಸ್ತರಣೆ, ಸಂಪುಟ ಪುನರಚನೆ, ಡಿಸಿಎಂ ಹುದ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಸಮನ್ವಯ ಸಮಿತಿ ಸಭೆಯಲ್ಲಿ ಈ ವರೆಗೆ ಯಾವುದೇ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ತಿಳಿದುಬಂದಿದೆ.

ಸಭೆಗೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಗೃಹ ಕಛೇರಿ ಕೃಷ್ಣಾದಲ್ಲಿ ದಿಗ್ವಿಜಯ್ ಸಿಂಗ್ ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸ್ಪೀಕರ್ ಕಾಗೋಡು ತಿಮ್ಮಪ್ಪ ವಿರುದ್ಧ ಕೆಂಡಾಮಂಡಲರಾದ ದಿಗ್ವಿಜಯ್ ಸಿಂಗ್, ಹಿರಿಯ ನಾಯಕರಾಗಿ ಬಾಲಿಶವಾಗಿ ಮಾತನಾಡುವುದು ಶೋಭೆತರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited