Untitled Document
Sign Up | Login    
Dynamic website and Portals
  
August 27, 2014

ಯಾದಗಿರಿಯಲ್ಲಿ ಸಾವಿರ ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ

ಬೆಂಗಳೂರು : ಯಾದಗಿರಿ ಜಿಲ್ಲೆ ಕಡಚೂರು ಬಾಡಿಹಾಳ ಗ್ರಾಮದ ಬಳಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಜವಳಿ ಖಾತೆ ಸಚಿವ ಬಾಬುರಾವ್ ಚಿಂಚನಸೂರ ತಿಳಿಸಿದ್ದಾರೆ.

ಈ ಉದ್ದೇಶಕ್ಕಾಗಿ ಸುಮಾರು 3300 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆವಳಿ ಪಾರ್ಕ್ ನಿರ್ಮಾಣದಿಂದ ಸುಮಾರು 5 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಹೂಡಿಕೆದಾರರಿಗೆ ಎಲ್ಲ ರೀತಿಯ ಮೂಲಸೌಕರ್ಯ ಒದಗಿಸುವುದಾಗಿ ಅವರು ತಿಳಿಸಿದರು.

ಇದೇ 30 ರಂದು ಬೆಂಗಳೂರಿನಲ್ಲಿ ಜವಳಿ ಹೂಡಿಕೆದಾರರ ರಾಜ್ಯಮಟ್ಟದ ಸಮಾವೇಶ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಈ ಸಮಾವೇಶದಲ್ಲಿ ವಿವಿಧ ರಾಜ್ಯಗಳಿಂದ ಸುಮಾರು 500 ಹೂಡಿಕೆದಾರರು ಭಾಗವಹಿಸುವ ನಿರೀಕ್ಷೆ ಇದ್ದು ಹತ್ತು ಸಾವಿರ ಕೋಟಿ ರೂ. ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited