ಬೆಂಗಳೂರು : ಉಪಚುನಾವಣೆಯಲ್ಲಿ ಪಕ್ಷದ ನಿರ್ಲಕ್ಷವೇ ಬಿಜೆಪಿ ಸೋಲಿಗೆ ಕಾರಣ ಎಂದು ರಾಷ್ಟ್ರ ಉಪಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ರಾಜ್ಯ ಸಂಸದರ ಸಭೆಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಸರಿಯಾಗಿ ಪ್ರಚಾರ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಚುನಾವಣೆ ವೇಳೆ ಯಾವ ಸಂಸದರೂ ಕ್ಷೇತ್ರದಲ್ಲಿ ಪ್ರಚಾರಕ್ಕೆ ಬಂದಿಲ್ಲ, ಬಂದು ಪ್ರಚಾರ ನಡೆಸಿದ್ದರೆ ಶಿಕಾರಿಪುರದಲ್ಲಿ ಕಡಿಮೆ ಅಂತರದಿಂದ ಬಿಜೆಪಿ ಗೆಲ್ಲುತ್ತಿರಲಿಲ್ಲ, ಪಕ್ಷದ ನಾಯಕರು ಸರಿಯಾಗಿ ಪ್ರಚಾರ ನಡೆಸಿದ್ದರೆ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಸೋಲುತ್ತಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಉಪಚುನಾವಣೆಯಲ್ಲಿ ಕಾಂಗ್ರೆಸ್ ತಂತ್ರಗಾರಿಕೆ ಚೆನ್ನಾಗಿತ್ತು ಎಂದು ಹೇಳಿರುವ ಬಿ.ಎಸ್.ಯಡಿಯೂರಪ್ಪ ಬಿಜೆಪಿ ರಾಜ್ಯ ನಾಯಕರ ನಿರ್ಲಕ್ಷವೇ ಸೋಲಿಗೆ ಕಾರಣ ಎಂದು ಗರಂ ಆಗಿ ಮಾತನಾಡಿದ್ದಾರೆ.