Untitled Document
Sign Up | Login    
Dynamic website and Portals
  
August 27, 2014

ರಾಜನಾಥ್ ಸಿಂಗ್ ಕುಟುಂಬದ ವಿರುದ್ಧದ ಆರೋಪ ಸುಳ್ಳು: ಅಮಿತ್ ಶಾ

ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್

ನವದೆಹಲಿ : ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಮರ್ಥಿಸಿಕೊಂಡಿದ್ದು, ರಾಜನಾಥ್ ಸಿಂಗ್ ಅವರ ಕುಟುಂಬ ಅವ್ಯವಹಾರದಲ್ಲಿ ತೊಡಗಿದೆ ಎಂಬುದು ಸುಳ್ಳು ಎಂದು ಹೇಳಿದ್ದಾರೆ.

ರಾಜನಾಥ್ ಸಿಂಗ್ ಹಾಗೂ ಅವರ ಪುತ್ರ ಪಂಕಜ್ ಸಿಂಗ್ ಅವರ ವಿರುದ್ಧ ಕೇಳಿಬಂದಿರುವ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಅಮಿತ್ ಶಾ ಹೇಳಿಕೆ ನೀಡಿದ್ದು ರಾಜನಾಥ್ ಸಿಂಗ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ನಮ್ಮ ಪಕ್ಷದ ಸಚಿವರು ಶುದ್ಧ ಹಸ್ತರು, ಗೃಹ ಸಚಿವರ ವಿರುದ್ಧದ ಆರೋಪಗಳಿಗೆ ಆಧಾರವಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

ಉತ್ತರ ಪ್ರದೇಶದ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆಗೆ ರಾಜನಾಥ್ ಸಿಂಗ್ ಪುತ್ರ ಪಂಕಜ್ ಸಿಂಗ್ ಗೆ ಟಿಕೆಟ್ ನಿರಾಕರಿಸಲು ಅವರ ವಿರುದ್ಧ ಕೇಳಿಬಂದಿರುವ ಅವ್ಯವಹಾರ ಆರೋಪವೇ ಕಾರಣ ಎಂಬ ವದಂತಿ ಹಬ್ಬಿತ್ತು.

ತಮ್ಮ ವಿರುದ್ಧ ಕೇಳಿಬಂದಿರುವ ಆರೋಪ ಸುಳ್ಳು ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಮನವರಿಕೆ ಮಾಡಿರುವುದಾಗಿ ರಾಜನಾಥ್ ಸಿಂಗ್ ಹೇಳಿದ್ದಾರೆ. ಇದೇ ವೇಳೆ ಪ್ರಧಾನಿ ಕಾರ್ಯಾಲಯ ಸಹ ಕೇಂದ್ರ ಗೃಹ ಸಚಿವರನ್ನು ಸಮರ್ಥಿಸಿಕೊಂಡಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited