Untitled Document
Sign Up | Login    
Dynamic website and Portals
  
August 29, 2014

ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ: ಗಣತಿ ನಡೆಸಲು ಸರ್ಕಾರದ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿರುವ ಖಾಸಗಿ ಸಂಸ್ಥೆಗಳು, ಐಟಿಬಿಟಿ ಸೇರಿದಂತೆ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ನೀಡಿರುವ ಉದ್ಯೋಗ ಪ್ರಮಾಣದ ಬಗ್ಗೆ ಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಐಟಿಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಡಿಮೆಯಾಗುತ್ತಿರುವ ವಿಚಾರವನ್ನೂ ಗಂಭೀರವಾಗಿ ಪರಿಗಣಿಸಲಾಗಿದ್ದು, ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅಲ್ಲದೇ ಅದರ ಬಗ್ಗೆಯೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಸರೋಜಿನಿ ಮಹಿಷಿ ವರದಿ ಪ್ರಕಾರ ಖಾಸಗಿ ರಂಗದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಲಭಿಸುತ್ತಿಲ್ಲ. ಜತೆಗೆ ಐಟಿಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಡಿಮೆಯಾಗುತ್ತಿದೆ. ಇದು ಗಂಭೀರ ವಿಚಾರ. ಈ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ವಸತಿ ಸಹಾಯಧನ ಮನ್ನಾ, ಕಾರ್ಪೊರೇಟ್ ಸಹಭಾಗಿತ್ವದಲ್ಲಿ ಪ್ರವಾಸಿ ತಾಣಗಳ ಅಭಿವೃದ್ಧಿ, ನ್ಯಾ.ಮೂ. ಸೋಮಶೇಖರ್ ಆಯೋಗದ ವರದಿ ಪುನರ್ ಪರಿಶೀಲನೆಗೂ ಸಿ.ಎಂ ಆದೇಶಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited