Untitled Document
Sign Up | Login    
Dynamic website and Portals
  
August 30, 2014

ಸಂಪುಟ ವಿಸ್ತರಣೆ ವಿಚಾರ: ಸೆ.3ಕ್ಕೆ ದೆಹಲಿಗೆ-ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ ಇಲ್ಲ, ಆದರೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಖಾಲಿಯಿರುವ ನಾಲ್ಕು ಸ್ಥಾನಗಳಿಗೆ ಭರ್ತಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಹೈಕಮಾಂಡ್ ಬುಲಾವ್ ಮೇರೆಗೆ ಸೆ.3ರಂದು ದೆಹಲಿಗೆ ಹೊರಡುತ್ತಿದ್ದೇವೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.

ಉತ್ತರ ಕರ್ನಾಟಕದ ಜಿಲ್ಲೆಗಲಾದ ರಾಯಚೂರು, ಗುಲ್ಬರ್ಗಾ ಮೊದಲಾದ ಜಿಲ್ಲೆಗಳಲ್ಲಿ ಪ್ರವಾಹ ವಿಚಾರಕ್ಕೆ ಸಂಬಂಧಿಸಿದಂತೆ, ನೆರೆ ಪರಿಹಾರ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿರುವುದಾಗಿ ತಿಳಿಸಿದರು.

ಇನ್ನು ಸದನಕ್ಕೆ ಸಂಸತ್ ಮಾದರಿ ಚಾನಲ್ ವಿಚಾರವಾಗಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಜತೆ ಈ ಬಗ್ಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited