Untitled Document
Sign Up | Login    
Dynamic website and Portals
  
September 1, 2014

ಪಾಕ್ ಭಯೋತ್ಪಾದನೆ ನಡುವೆ ಶಾಂತಿ ಮಾತುಕತೆ ಅಸಾಧ್ಯ: ರಾಜನಾಥ್ ಸಿಂಗ್

ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್

ನವದೆಹಲಿ : 'ಪಾಕಿಸ್ತಾನ' ಭಯೋತ್ಪಾದನೆ ನಿಲ್ಲಿಸುವವರೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಪಾಕ್ ನೊಂದಿಗೆ ನಡೆಯಬೇಕಿದ್ದ ವಿದೇಶಾಂಗ ಕಾರ್ಯದರ್ಶಿ ಮಟ್ಟದ ಸಭೆಯನ್ನು ಭಾರತ ರದ್ದುಪಡಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವರು ಸದ್ಯದಲ್ಲೇ ಪಾಕ್ ಗೃಹ ಸಚಿವ ಚೌಧರಿ ನಿಸಾರ್ ಅಲಿ ಖಾನ್ ರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ ಈ ವದಂತಿಗಳನ್ನು ಸ್ವತಃ ರಾಜನಾಥ್ ಸಿಂಗ್ ಅಲ್ಲಗಳೆದಿದ್ದಾರೆ.

ಭಯೋತ್ಪಾದನೆ, ದ್ವಿಪಕ್ಷೀಯ ಮಾತುಕತೆ ಜೊತೆಯಲ್ಲಿ ಸಾಗಲು ಸಾಧ್ಯವಿಲ್ಲ. ಪಾಕಿಸ್ತಾನ ಭಯೋತ್ಪಾದನೆ ನಡೆಸುವುದನ್ನು ಬಿಡಲಿ ಆ ನಂತರ ದ್ವಿಪಕ್ಷೀಯ ಮಾತುಕತೆ ನಡೆಸುತ್ತೇವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಸೆ.18 ಹಾಗೂ 19ರಂದು ನೇಪಾಳದಲ್ಲಿ ನಡೆಯುವ ಸಾರ್ಕ್ ಸಮಾವೇಶದಲ್ಲಿ ಉಭಯ ನಾಯಕರು ಭೇಟಿಯಾಗಿ ಭಯೋತ್ಪಾದನೆ, ಕದನ ವಿರಾಮ ಉಲ್ಲಂಘನೆಯಂತ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಸದ್ಯದಲ್ಲಿ ಪಾಕ್ ನೊಂದಿಗೆ ಶಾಂತಿ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಪಾಕಿಸ್ತಾನ ಪದೇ ಪದೇ ಜಮ್ಮು-ಕಾಶ್ಮೀರ ಗಡಿ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಪಾಕ್ ನೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited