Untitled Document
Sign Up | Login    
Dynamic website and Portals
  
September 1, 2014

ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರಕ್ಕೆ ಸಿದ್ಧತೆ: ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು : ಅರ್ಕವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ಸಾರಲು ಬಿಜೆಪಿ ಮುಂದಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವ ಸಂಬಂಧ ರಾಜ್ಯಪಾಲರಲ್ಲಿ ಮನವಿ ಮಾಡುವ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ.

ಕರ್ನಾಟಕದ ರಾಜ್ಯಪಾಲರಾಗಿ ವಾಜುಭಾಯಿ ವಾಲಾ ಸೆ.1ರಂದು ಪದಗ್ರಹಣ ಮಾಡಲಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವ ಕುರಿತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದೆ. ಈ ವಿಚಾರವೇ ಸಭೆಯ ಮಹತ್ವದ ವಿಷಯವಾಗಿದೆ. ರಾಜ್ಯಪಾಲರ ಮೂಲಕ ರಾಜ್ಯ ಕಾಂಗ್ರೆಸ್ ಆಡಳಿತವನ್ನು ಕಟ್ಟಿಹಾಕುವ ಯತ್ನ ನಡೆಸಲಿದೆ.್

ಈ ನಡುವೆ ಡಿನೋಟಿಫಿಕೆಷನ್ ಹಗರಣಕ್ಕೆ ಸಂಬಂಧಿಸಿದಂತೆ ಶಾಸಕ ಸುರೇಶ್ ಕುಮಾರ್ ನೇತೃತ್ವದ ಸಮಿತಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿಯವರಿಗೆ ವರದಿ ನೀಡಿದೆ. ವರದಿ ಅಧ್ಯಯನ ಹಿನ್ನಲೆಯಲ್ಲಿ ಬೆಳಿಗ್ಗೆ 11ಗಂಟೆಗೆ ನಡೆಯಬೇಕಾಗಿದ್ದ ಕೋರ್ ಕಮಿಟಿ ಸಭೆಯನ್ನು ಮಧ್ಯಾಹ್ನ 1 ಗಂಟೆಗೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited