Untitled Document
Sign Up | Login    
Dynamic website and Portals
  
September 1, 2014

ಕೇರಳಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಕೇರಳದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೇರಳದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ತಿರುವನಂತಪುರಂ : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೆ.1ರಂದು ದೇಗುಲಗಳ ನಗರಿ ಕೇರಳಕ್ಕೆ ಭೇಟಿ ನೀಡಿದ್ದಾರೆ. ರಾಜ್ಯ ಕಾರ್ಯಕಾರಿಣಿ ಸಭೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಕೇರಳ ಬಿಜೆಪಿ ಮುಖಂಡರನ್ನುದ್ದೇಶಿಸಿ ಅಮಿತ್ ಶಾ ಮಾತನಾಡಲಿದ್ದಾರೆ.

ಮುಂದಿನ ವರ್ಷ ಕೇರಳದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದ್ದು ಬಿಜೆಪಿ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಾದರೂ ಗೆಲುವು ಸಾಧಿಸಲು ಕಾರ್ಯತಂತ್ರ ರೂಪಿಸುತ್ತಿದೆ. ಲೋಕಸಭಾ ಚುನಾವಣೆಯಲ್ಲಾಗಲೀ, ವಿಧಾನಸಭಾ ಚುನಾವಣೆಯಲ್ಲಾಗಲೀ ಕೇರಳದಲ್ಲಿ ಬಿಜೆಪಿ ಈ ವರೆಗೂ ಖಾತೆ ತೆರೆದಿಲ್ಲ. ಇದೀಗ ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸಲು ಬಿಜೆಪಿ ತಯಾರಿ ನಡೆಸುತ್ತಿರುವ ಸಂದರ್ಭದಲ್ಲಿ ಅಮಿತ್ ಶಾ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.

ಇದೇ ವೇಳೆ ಬಿಜೆಪಿ ಪಕ್ಷದ 6000 ಕಾರ್ಯಕರ್ತರೊಂದಿಗೆ ಅಮಿತ್ ಶಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಕೇರಳದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದು ಹೇಳಲಾಗುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೇರಳದ 140 ಕ್ಷೇತ್ರಗಳಲ್ಲಿ ಕೆಲವೊಂದು ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ತಂತ್ರ ರೂಪಿಸುತ್ತಿದೆ.

2014ರ ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಓ.ರಾಜಗೋಪಾಲ್, ಮಾಜಿ ಕೇಂದ್ರ ಸಚಿವ ಶಶಿತರೂರ್ ಅವರಿಗೆ ಬಲವಾದ ಪೈಪೋಟಿ ನೀಡಿ ಪರಾಭವಗೊಂಡಿದ್ದರು. ಬಿಜೆಪಿ ಕೇರಳದಲ್ಲಿ ಖಾತೆ ತೆರೆಯಲು ಭರ್ಜರಿ ಕಾರ್ಯತಂತ್ರ ರೂಪಿಸಿದೆ. ಉತ್ತರ ಪ್ರದೇಶದಲ್ಲಿ ಯಶಸ್ವಿಯಾದ ಅಮಿತ್ ಶಾ ಮ್ಯಾಜಿಕ್ ಕೇರಳದಲ್ಲೂ ಯಶಸ್ವಿಯಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited