Untitled Document
Sign Up | Login    
Dynamic website and Portals
  
September 4, 2014

ಭಾರತದಲ್ಲಿ ಆಸ್ಟ್ರೇಲಿಯಾ ಪ್ರಧಾನಿ: ಪರಮಾಣು ಸಹಕಾರ ಒಪ್ಪಂದಕ್ಕೆ ಸಹಿ ಸಾಧ್ಯತೆ

ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಪ್ರಧಾನಿ ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಪ್ರಧಾನಿ

ನವದೆಹಲಿ : ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ 3 ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ&id=15493'>ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿರುವ ಟೋನಿ ಅಬೋಟ್, ಗಣಿಗಾರಿಕೆ, ಹಣಕಾಸು, ಶಿಕ್ಷಣ ಕ್ಷೇತ್ರದಲ್ಲಿ ಸ್ನೇಹ ಬೆಳೆಸಲು ಉತ್ಸುಕರಾಗಿದ್ದಾರೆ.

ಆಸ್ಟ್ರೇಲಿಯಾ ಪ್ರಧಾನಿ ಭಾರತದೊಂದಿಗೆ ಪರಮಾಣು ಸಹಕಾರ ಒಪ್ಪಂದಕ್ಕೆ ಸಹಿ ಹಾಕಲು ಉತ್ಸುಕರಾಗಿದ್ದಾರೆ. ಭಾರತ ಆಸ್ಟ್ರೇಲಿಯಾ ಪರಮಾಣು ಸಹಕಾರ ಒಪ್ಪಂದಕ್ಕೆ ಸಹಿ ಹಾಕಿದರೆ ಭಾರತಕ್ಕೆ ಯುರೇನಿಯಂ ರಫ್ತು ಮಾಡಲು ಸಹಕಾರಿಯಾಗಲಿದೆ.

ಯುರೇನಿಯಂ ರಫ್ತು ಮಾಡಿದರೆ ಭಾರತದಲ್ಲಿನ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಸಾಹಯಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ-ಟೋನಿ ಅಬೋಟ್ ಮಾತುಕತೆ ಮಹತ್ವ ಪಡೆದುಕೊಂಡಿದೆ.

ತಮ್ಮ 3 ದಿನಗಳ ಭಾರತ ಪ್ರವಾಸದ ಬಗ್ಗೆ ಆಸ್ಟ್ರೇಲಿಯಾ ಸಂಸತ್‌ನಲ್ಲಿ ಮಾತನಾಡಿದ್ದ ಟೋನಿ, ನಾವು ಭಾರತದ ಜತೆ ಪರಮಾಣು ಸಹಕಾರ ಒಪ್ಪಂದಕ್ಕೆ ಸಹಿ ಹಾಕಲು ನಿರ್ಧರಿಸಿದ್ದೇವೆ. ಇದರಿಂದಾಗಿ ಭಾರತದಲ್ಲಿನ ವಿದ್ಯುತ್ ಕ್ಷೇತ್ರಕ್ಕೆ ಮತ್ತಷ್ಟು ಶಕ್ತಿ ದೊರೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದರು.

ಪ್ರಧಾನಿ ನರೇಂದ್ರ ಮೋದಿ&id=15493'>ನರೇಂದ್ರ ಮೋದಿ ಅವರ ಜಪಾನ್ ಪ್ರವಾಸ ಯಶಸ್ವಿಯಾಗಿ ಮುಗಿಯುತ್ತಿದ್ದಂತೆಯೇ, ಆಸ್ಟ್ರೇಲಿಯಾ, ಚೀನಾ ಭಾರತದತ್ತ ಮುಖ ಮಾಡಿ ನಿಂತಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited