Untitled Document
Sign Up | Login    
Dynamic website and Portals
  
September 4, 2014

ಡಿಸಿಎಂ ಹುದ್ದೆ ಸೃಷ್ಠಿಸಲ್ಲ 'ಪರಮೇಶ್ವರ'!

ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್

ನವದೆಹಲಿ : ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಠಿಸುವ ಅನಿವಾರ್ಯತೆ, ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಡಿ.ಸಿ.ಎಂ ಹುದ್ದೆ ಸೃಷ್ಠಿಸಿದರೆ ಸರ್ಕಾರದಲ್ಲಿ 2 ಶಕ್ತಿ ಕೇಂದ್ರಗಳು ನಿರ್ಮಾಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಹುದ್ದೆ ಸೃಷ್ಠಿ ಬೇಡ ಎಂದು ಸಿದ್ದರಾಮಯ್ಯ ಹೈಕಮಾಂಡ್ ಗೆ ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಹಾಗೂ ರಾಜ್ಯದಲ್ಲಿ ಡಿಸಿಎಂ ಹುದ್ದೆ ಸೃಷ್ಠಿ ಬಗ್ಗೆ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಡಿಸಿಎಂ ಹುದ್ದೆ ಅಗತ್ಯವಲ್ಲ ಎಂದು ಹೇಳಿದ್ದಾರೆ. ಇದೇ ವಿಷಯವನ್ನು ರಾಹುಲ್ ಗಾಂಧಿ ಹಾಗೂ ಅಹಮದ್ ಪಟೇಲ್ ಅವರಿಗೂ ಸಿ.ಎಂ ತಿಳಿಸಿದ್ದಾರೆ. ಸಿದ್ದರಾಮಯ್ಯ ಡಿ.ಸಿ.ಎಂ ಹುದ್ದೆ ಆಕಾಂಕ್ಷಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರ ಕನಸು ನುಚ್ಚು ನೂರಾಗಿದೆ.

ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಈ ವರೆಗಿನ ವರದಿಗಳ ಪ್ರಕಾರ ದಸರಾ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದೆಂದು ಹೇಳಲಾಗಿತ್ತು. ಆದರೆ 4 ಸ್ಥಾನಗಳಿಗೆ 20 ಆಕಾಂಕ್ಷಿಗಳಿರುವುದರಿಂದ ಸಚಿವ ಸಂಪುಟ ವಿಸ್ತರಣೆ ಮಾಡಿದರೆ ಭಿನ್ನಮತ ಸ್ಫೋಟಗೊಳ್ಳುವ ಸಾಧ್ಯತೆ ಇರುವುದರಿಂದ ಸಂಪುಟ ವಿಸ್ತರಣೆ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಹೈಕಮಾಂಡ್ ಗೆ ತಿಳಿಸಿದ್ದಾರೆ. ಇದಕ್ಕೆ ಹೈಕಮಾಂಡ್ ಸಹ ಒಪ್ಪಿದೆ. ರಾಷ್ಟ್ರಮಟ್ಟದಲ್ಲಿ ಕಳೆಗುಂದಿರುವ ಕಾಂಗ್ರೆಸ್ ಸಿದ್ದರಾಮಯ್ಯ ಅವರ ಒತ್ತಡಕ್ಕೆ ಮಣಿದಿದ್ದು ಮುಜುಗರ ಉಂಟಾಗದಂತೆ ಸರ್ಕಾರ ನಡೆಸಲು ಸಿದ್ದರಾಮಯ್ಯ ಅವರಿಗೆ ಸಹಕಾರ ನೀಡುವುದಾಗಿ ತಿಳಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited