Untitled Document
Sign Up | Login    
Dynamic website and Portals
  
September 5, 2014

ಶಿಕ್ಷಕರ ದಿನಾಚರಣೆ: ಮೋದಿ ಸಂವಾದ ವೀಕ್ಷಣೆಗೆ ಶಾಲೆಗಳು ಸಜ್ಜು

ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ : ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಕ್ಕಳ ಜತೆ ಸಂವಾದ ನಡೆಸಲಿದ್ದಾರೆ. ಇದರ ವೀಕ್ಷಣೆಗೆ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಸಿದ್ಧತೆ ನಡೆಸಲಾಗಿದೆ.

ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಪ್ರಧಾನಿ ಮೋದಿ ನೇರ ಸಂವಾದ ಕಾರ್ಯಕ್ರಮ ಏರ್ಪಡಿಸಲ್ಕಾಗಿದೆ. ಹಲವು ಶಾಲೆಗಳಲ್ಲಿ ಎಜುಸ್ಯಾಟ್, ದೂರದರ್ಶನ, ರೇಡಿಯೋ ಮೂಲಕ ವಿದ್ಯಾರ್ಥಿಗಳಿಗೆ ಭಾಷಣ ಕೇಳಿಸಲು ಶಾಲಾ ಮುಖ್ಯೋಪಾಧ್ಯಾಯರು ಸಿದ್ಧತೆ ನಡೆಸಿದ್ದಾರೆ. ಇನ್ನೊಂದೆಡೆ ಖಾಸಗಿ ಶಾಲೆಗಳು ಸ್ವ-ಆಸಕ್ತಿಯಿಂದ ಶಾಲೆಗಳ ಸಭಾಂಗಣದಲ್ಲಿ ಎಲ್.ಇ.ಡಿ ಪರದೆ ಅಳವಡಿಸಿ ವಿದ್ಯಾರ್ಥಿಗಳಿಗೆ ಸಂವಾದ ರೆಕಾರ್ಡಿಂಗ್ ಗೂ ಅಗತ್ಯ ಸಿದ್ಧತೆ ಮಾಡಿಕೊಂಡಿವೆ.


ರಾಜ್ಯದಲ್ಲಿರುವ 49,114 ಸರ್ಕಾರಿ ಶಾಲೆಗಳ ಪೈಕಿ ಸುಮಾರು 1,800 ಶಾಲೆಗಳಲ್ಲಿ ಮಾತ್ರ ಎಜುಸ್ಯಾಟ್ ವ್ಯವಸ್ಥೆಗೆ ಅವಕಾಶವಿದ್ದು, ಇಲ್ಲಿ ಸ್ವೀಕರಣಾ ವ್ಯವಸ್ಥೆಯಿದ ಸಂವಾದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಉಳಿದಂತೆ 6,355 ಅನುದಾನಿತ ಶಾಲೆಗಳಲ್ಲೂ ಸೂಕ್ತ ವ್ಯವಸ್ಥೆ ಇರುವೆಡೆ ಸಂವಾದ ವೀಕ್ಷಣೆಗೆ ಸೌಲಭ್ಯ ಒದಗಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಯಾವುದೇ ಶಾಲೆಯ ಮಕ್ಕಳೊಂದಿಗೆ ವೀಡಿಯೋ ಸಂವಾದ ನಡೆಸುವುದಿಲ್ಲ, ಆದರೆ ಮೋದಿ ಸಂವಾದ ವೀಕ್ಷಣೆಗೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಎಲ್ಲಾ ಶಾಲೆಗಳಿಗೆ ಸಂದೇಶ ಕಳುಹಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೊಹಮ್ಮದ್ ಮೊಹಿಸಿನ್ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited