Untitled Document
Sign Up | Login    
Dynamic website and Portals
  
September 6, 2014

ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಪ್ರವಾಹ: 90ಕ್ಕೇರಿದ ಸಾವಿನ ಸಂಖ್ಯೆ

ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಮಳೆಯ ಆರ್ಭಟದಿಂದಾಗಿ ಉಂಟಾಗಿರುವ ಪ್ರವಾಹ ಇನ್ನೂ ಮುಂದುವರೆದಿದ್ದು, ಸಾವಿನ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ 6 ದಶಕಗಳಿಂದ ಕಂಡುಕೇಳರಿಯದಷ್ಟು ಪ್ರಮಾಣದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಒಂದೆಡೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದರೆ ಇನ್ನೊಂದೆಡೆ ಭೂಕುಸಿತವುಂಟಾಗುತ್ತಿದೆ. ರಾಜ್ಯ ಸರ್ಕಾರ ಕಟ್ಟೆಚ್ಚ ಘೋಷಿಸಿದೆ.

ರಾಜೋರಿಯಲ್ಲಿ ಮನೆ ಕುಸಿದುಬಿದ್ದ ಪರುಣಾಮ 13 ಜನರು ಸಾವನ್ನಪ್ಪಿದ್ದಾರೆ. ಜಮ್ಮುವಿನಲ್ಲೇ 17 ಜನರು ಸಾವನ್ನಪ್ಪಿದ್ದಾರೆ. ಈ ನಡುವೆ ಪ್ರವಾಹದಲ್ಲಿ ಸಿಲುಕಿದ್ದ 6000 ಸಂತ್ರಸ್ತರನ್ನು ಸೇನೆ ರಕ್ಷಿಸಿದೆ.

ಜಮ್ಮು-ಶ್ರೀನಗರ ನಡುವಿನ 300 ಕಿ.ಮೀ ಉದ್ದದ ಹೆದ್ದಾರಿಯನ್ನು ಎರಡನೇ ದಿನವೂ ಬಂದ್ ಮಾಡಲಾಗಿದ್ದು, ಇದರಿಂದಾಗಿ 1200 ವಾಹನಗಳು ರಸ್ತೆಯಲ್ಲಿಯೇ ನಿಲ್ಲುವಂತಾಗಿದೆ. ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಸೆ.6ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Agriculture & Environment

ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ
  • ವರುಣನ ಅರ್ಭಟಕ್ಕೆ 8 ಜನರು ಬಲಿ: ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited