ಜಮ್ಮು-ಕಾಶ್ಮೀರ : 'ಜಮ್ಮು'ವಿನಲ್ಲಿ ಉಂಟಾಗಿರುವ ಪ್ರವಾಹದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ 9ಯೋಧರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಜಮ್ಮು-ಕಾಶ್ಮೀರದ ಪುಲ್ವಾಮ ಬಳಿ ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಯೋಧರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಈ ವೇಳೆ ಪ್ರವಾಹದ ರಭಸಕ್ಕೆ ದೋಣಿ ಸಮೇತ ಯೋಧರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಪ್ರವಾಹದಲ್ಲಿ ಕೊಚ್ಚಿ ಹೋದ ಯೋಧರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಭಾರತೀಯ ಸೇನೆ ಮತ್ತು ಪೊಲೀಸರು ಸೇರಿದಂತೆ ಒಟ್ಟು 85 ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಮಳೆಯ ಆರ್ಭಟದಿಂದಾಗಿ ಉಂಟಾಗಿರುವ ಪ್ರವಾಹ ಇನ್ನೂ ಮುಂದುವರೆದಿದೆ. ಸಾವಿನ ಸಂಖ್ಯೆ 120 ಕ್ಕೆ ಏರಿಕೆಯಾಗಿದೆ. ಜಮ್ಮು-ಕಾಶ್ಮೀರದಲ್ಲಿ 6 ದಶಕಗಳಿಂದ ಕಂಡುಕೇಳರಿಯದಷ್ಟು ಪ್ರಮಾಣದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.