Untitled Document
Sign Up | Login    
Dynamic website and Portals
  
September 6, 2014

ಅತಿವೃಷ್ಟಿಯಿಂದ ಹಾನಿ ಹಿನ್ನಲೆ: ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ

ಗುಲ್ಬರ್ಗಾ : ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ನಷ್ಟ ಹಿನ್ನಲೆಯಲ್ಲಿ ನಿಯೋಗದೊಂದಿಗೆ ದೆಹಲಿಗೆ ತೆರಳಿ, ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಗುಲ್ಬರ್ಗಾದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿ ಅತಿವೃಷ್ಟಿಯಾಗಿದೆ. ನಾಲ್ಕು ಜಿಲ್ಲೆಗಳಲ್ಲಿ ಬರಗಾಲ ಸ್ಥಿತಿಯಿದೆ ಎಂದು ತಿಳಿಸಿದರು.

ಜಿಲ್ಲೆಗಳಲ್ಲಿ ಉಂಟಾದ ಹಾನಿ ಕುರಿತು ವರದಿ ಪಡೆದ ಮುಖ್ಯಮಂತ್ರಿಗಳು, ಅತಿವೃಷ್ಟಿ ಹಾಗೂ ಬರ ಪೀಡಿತ ಜಿಲ್ಲೆಗಳಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದರು. ಅಲ್ಲದೇ ನಿಯೋಗದೊಂದಿಗೆ ತೆರಳಿ, ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited