ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಪ್ರವಾಹಕ್ಕೆ ಕಣಿವೆ ರಾಜ್ಯದ ಜನತೆ ತತ್ತರಿಸಿಹೋಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ವರುಣನ ಆರ್ಭಟಕ್ಕೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತಿದ್ದು, 200ಕ್ಕೂ ಹೆಚ್ಚು ಗ್ರಾಮಗಳು ಸಂಪೂರ್ಣ ಜಲಾವೃತವಾಗಿವೆ. ಸಾವಿನ ಸಂಖ್ಯೆ 150ಕ್ಕೆ ಏರಿಕೆಯಾಗಿದೆ. ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಲಗಳಿಗೆ ರವಾನಿಸಲಾಗುತ್ತಿದೆ. ಪ್ರವಾಹದಲ್ಲಿ ಸಿಲುಕಿರುವ 7000ಜನರನ್ನು ಈಗಾಗಲೇ ರಕ್ಷಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಜಮ್ಮು-ಕಾಶ್ಮೀರದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಿಮಾನದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಜಮ್ಮುವಿಗೆ ಅಗಮಿಸಿದ್ದಾರೆ.
ವೈಮಾನಿಕ ಸಮಿಕ್ಷೆ ಬಳಿಕ ಪ್ರವಾಹ ಪರಿಸ್ಥಿತಿ ಕುರಿತು ಮೋದಿ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಕೇಂದ್ರ ಸರ್ಕಾರದಿಂದ ಜಮ್ಮು-ಕಾಶ್ಮೀರಕ್ಕೆ ಪರಿಹಾರ ಘೋಷಿಸುವ ನಿರೀಕ್ಷೆಯಿದೆ.