Untitled Document
Sign Up | Login    
Dynamic website and Portals
  
September 7, 2014

ಜಮ್ಮು-ಕಾಶ್ಮೀರ ಜನತೆ ಆತಂಕಪಡುವ ಅಗತ್ಯವಿಲ್ಲ: ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಧಾನಮಂತ್ರಿ ನರೇಂದ್ರ ಮೋದಿ

ಶ್ರೀನಗರ : ಜಮ್ಮು-ಕಾಶ್ಮೀರದ ಜನತೆ ಆತಂಕಪಡುವ ಅಗತ್ಯವಿಲ್ಲ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರ ಬದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾಗುತಿರುವ ಪ್ರವಾಹಕ್ಕೆ ಸಿಲುಕಿ ನೂರಕ್ಕಿಂತ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಗ್ರಾಮಗಳು ಜಾವೃತಗೊಂಡಿದೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.

ವೈಮಾನಿಕ ಸಮೀಕ್ಷೆ ಬಳಿಕ ಶ್ರೀನಗರದಲ್ಲಿ ಮಾತನಾಡಿದ ಮೋದಿ, ಜಮ್ಮು-ಕಾಶ್ಮೀರವನ್ನು ಮೊದಲ ಸ್ಥಿತಿಗೆ ತರಲು ಕೇಂದ್ರ ಸರ್ಕಾರ ಬದ್ಧವಾಗಿದೆ. ರಾಜ್ಯದ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು.

ಪ್ರವಾಹ ಹಾಗೂ ಭೂ ಕುಸಿತದಿಂದಾಗಿ ಮೃತಪಟ್ಟಿರುವ ಕುಟುಂಬಗಳಿಗೆ ತಲಾ 2 ಲಕ್ಷ ಹಾಗೂ ಗಾಯಾಳುಗಳ ಕುಟುಂಬಕ್ಕೆ ತಲಾ 50 ಸಾವಿರ ರೂ ಪರಿಹಾರ ನೀಡುವುದಾಗಿ ಘೋಷಿಸಿದರು. ವಿಮಾನಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದರು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರ ರಕ್ಷಣೆಗಾಗಿ ನವದೆಹಲಿಯಿಂದ ವಿಮಾನಗಳ ಮೂಲಕ ಬೋಟ್ ಗಳನ್ನು ಕಳುಹಿಸಲಾಗುವುದು. ಜಮ್ಮುವಿನಲ್ಲಿ ಹಾನಿಗೊಂಡ ಬ್ರಿಡ್ಜ್ ಗಳನ್ನು ಸೇನೆಯ ನೆರವಿನಿಂದ ಮರು ನಿರ್ಮಾಣ ಮಾಡಲಾಗುತ್ತದೆ ಎಂದು ಮೋದಿ ತಿಳಿಸಿದ್ದಾರೆ.

ಅಲ್ಲದೇ ಇದು ಪ್ರವಾಹವಲ್ಲ ರಾಷ್ಟ್ರೀಯ ವಿಪತ್ತು ಎಂದ ಪ್ರಧಾನಿ ಮೋದಿ, ಜಮ್ಮು-ಕಾಶ್ಮೀರ ಸರ್ಕಾರಕ್ಕೆ ಕೇಂದ್ರ ಸರ್ಕಾರದಿಂದ 1 ಸಾವಿರ ಕೋಟಿ ರೂ ಬಿಡುಗಡೆಮಾಡಲಾಗುವುದು ಎಂದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited