Untitled Document
Sign Up | Login    
Dynamic website and Portals
  
September 8, 2014

ಆಪ್ ನ ದೆಹಲಿ ಶಾಸಕರ ಖರೀದಿ ಆರೋಪ ತಳ್ಳಿಹಾಕಿದ ಬಿಜೆಪಿ

ನವದೆಹಲಿ : 'ದೆಹಲಿ'ಯಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸಿರುವ ಬಿಜೆಪಿ ಆಪ್ ಪಕ್ಷದ ಶಾಸಕರನ್ನು ಖರೀದಿಸುತ್ತಿದೆ ಎಂಬ ಆಮ್ ಆದ್ಮಿ ಪಕ್ಷದ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ.

ಆಮ್ ಆದ್ಮಿ ಪಕ್ಷದ ಶಾಸಕರಿಗೆ ಬಿಜೆಪಿ ಆಮಿಷವೊಡ್ಡುತ್ತಿರುವ ವಿಡಿಯೋ ಒಂದನ್ನು ಆಪ್ ಬಿಡುಗಡೆ ಮಾಡಿದ್ದು, ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಗಂಭೀರ ಆರೋಪ ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ವಿಜಯೇಂದ್ರ ಗುಪ್ತಾ, ಆಪ್ ಆರೋಪ ಬಿಜೆಪಿ ಜನಪ್ರಿಯತೆಯನ್ನು ಕುಗ್ಗಿಸುವ ಕುತಂತ್ರ ಎಂದು ಹೇಳಿದ್ದಾರೆ.

ಆಪ್ ಮುಖಂಡರು ಈ ಹಿಂದೆ ಬಿಜೆಪಿ ನಾಯಕ ನಿತಿನ್ ಗಡ್ಕರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಆದರೆ ಆರೋಪ ಸುಳ್ಳಾದ ಪರಿಣಾಮ ನಿತಿನ್ ಗಡ್ಕರಿ ಅವರನ್ನು ಕ್ಷಮೆ ಯಾಚಿಸಬೇಕಾಯಿತು. ಪ್ರಸ್ತುತ ಆಪ್ ಮಾಡಿರುವ ಆರೋಪವೂ ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಕಸರತ್ತು ಆರಂಭಿಸಿರುವ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ಮುಖಂಡರು ವಿಡಿಯೋ ಬಿಡುಗಡೆ ಮಾಡಿ ಬಿಜೆಪಿ ನಾಯಕರು ನಮ್ಮ ಪಕ್ಷದ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದರು.

ದೆಹಲಿಯಲ್ಲಿ ಕಾಂಗ್ರೆಸ್ ಬೆಂಬಲದಿಂದ ಸರ್ಕಾರ ರಚಿಸಿದ್ದ ಅರವಿಂದ್ ಕೇಜ್ರಿವಾಲ್, ಅಧಿಕಾರ ವಹಿಸಿಕೊಂಡ 49 ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಇದೀಗ ಮತ್ತೊಮ್ಮೆ ದೆಹಲಿಯಲ್ಲಿ ಸರ್ಕಾರ ರಚನೆ ಕಸರತ್ತು ಆರಂಭಾವಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited