ಕೇರಳ : ಕೆಲವೇ ವರ್ಷಗಳಲ್ಲಿ ಕೇರಳದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆಯಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೇರಳದಲ್ಲಿ ಬಿಜೆಪಿಗೆ ಕನಿಷ್ಠ ಸೀಟು ಗೆಲ್ಲಲು ಸಾಧ್ಯವಾಗಿಲ್ಲ ಎಂದು ಕೊರಗುವ ಅಗತ್ಯವಿಲ್ಲ, ಪಕ್ಷ ಚುನಾವಣೆಯಿಂದ ಚುನಾವಣೆಗೆ ಬಲವರ್ಧನೆಯಾಗುತ್ತಿದೆ. ಇನ್ನು ಕೆಲವೇ ವರ್ಷಗಳಲ್ಲಿ ಬಿಜೆಪಿ ಕೇರಳದಲ್ಲಿ ಹೊಸ ಇತಿಹಾಸ ಬರೆಯಲಿದೆ ಎಂದರು.
ಈ ಕುರಿತು ಸ್ಪಷ್ಟನೆ ನೀಡಿರುವ ಅಮಿತ್ ಶಾ, ಉತ್ತರ ಪ್ರದೇಶದ ಉದಾಹರಣೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳ ಪೈಕಿ 72 ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. 2009ರ ಚುನಾವಣೆಯಲ್ಲಿ ಕೇವಲ 17 ಸ್ಥಾನಗಳಲ್ಲಿ ಮಾತ್ರ ಪಕ್ಷ 50 ಸಾವಿರಕ್ಕಿಂತ ಹೆಚ್ಚು ಮತಗಳಿಸಿತ್ತು. 2014ರಲ್ಲಿ ಕೇರಳದ 20ಲೋಕಸಭಾ ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳಲ್ಲಿ 50ಸಾವಿರಕ್ಕಿಂತ ಹೆಚ್ಚು ಮತಗಳಿಸಿದೆ ಎಂದರು.
ನಾಯಕರಲ್ಲಿ ಗೆಲುತ್ತೇವೆ ಎಂಬ ವಿಶ್ವಾಸ ಇರುವುದು ಮುಖ್ಯ. ಮೊದಲು ನಯಾಕರು ಆತ್ಮವಿಶ್ವಾಸ ಬೆಳಸಿಕೊಳ್ಳಿ. ಆಗ ಬದಲಾವಣೆ ಕಾಣಿಸಿಕೊಳ್ಳುತ್ತದೆ ಎಂದು ಕಿವಿಮಾತು ಹೇಳಿದ್ದಾರೆ.