ನವದೆಹಲಿ : ದೇಶಾದ್ಯಂತ ಮುಂದಿನ 48 ಗಂಟೆಗಳೊಳಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ ನಾಲ್ಕು ದಿನಳವರೆಗೆ ಭಾರೀ ಮಳೆಯಾಗಲಿದ್ದು, ಸಮುದ್ರಗಳಲ್ಲಿ ಮೀನುಗಾರಿಕೆಗೆ ತೆರಳದಂತೆ ನಿರ್ಬಂಧ ಹಾಕಬೇಕು ಹಾಗೂ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ.
ಅಂಡಮಾನ್ - ನಿಕೋಬಾರ್, ಲಕ್ಷದ್ವೀಪ, ಅಸ್ಸಾಂ, ಮೆಘಾಲಯ,ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಗೋವಾ, ರಾಜಸ್ಥಾನದ ಹಲವೆಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕರಾವಳಿ ತೀರ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸಮುದ್ರ ಹಾಗೂ ನದಿ ತೀರ ಪಾತ್ರಗಳಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಸೂಚಿಸಲಾಗಿದೆ.