ನವದೆಹಲಿ : ಬಹುಕೋಟಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾರವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಮಾಡಿದೆ.
ಕಲ್ಲಿದ್ದಲು ಹಗರಣದಲ್ಲಿ ಭಾಗಿಯಾಗಿರುವವರು ರಂಜಿತ್ ಸಿನ್ಹಾ ನಿವಾಸಕ್ಕೆ ಭೇಟಿ ನೀಡಿದ್ದರ ಔಚಿತ್ಯವೇನು ಎಂದು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್, ಸೆ.19ರೊಳಗೆ ಉತ್ತರ ನೀಡುವಂತೆ ಸೂಚಿಸಿದೆ.
ಕಲ್ಲಿದ್ದಲು ಹಗರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾ ನಿವಾಸಕ್ಕೆ ಭೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಸಿನ್ಹಾ ಮನೆಯ ವಿಜಿಟರ್ಸ್ ಡೈರಿಯಲ್ಲಿ ಉಲ್ಲಖವಿದೆ ಎಂದು ಆರೋಪಿಸಿ ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಆರ್.ಎಂ.ಲೋಧಾ ನೇತೃತ್ವದ ನ್ಯಾಯಪೀಠ, ರಂಜಿತ್ ಸಿನ್ಹಾ ಅವರಿಗೆ ನೋಟಿಸ್ ಜಾರಿಮಾಡಿದೆ.