Untitled Document
Sign Up | Login    
Dynamic website and Portals
  
September 10, 2014

ಬಿಜೆಪಿ ಚುನಾವಣಾ ಸಮಿತಿ ಕಾರ್ಯದರ್ಶಿಯಾಗಿ ಜೆ.ಪಿ.ನಡ್ಡಾ ನೇಮಕ

ನವದೆಹಲಿ : ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಅಖೈರುಗೊಳಿಸುವ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಗೆ ಪ್ರಧಾನ ಕಾರ್ಯದರ್ಶಿ ಜೆ.ಪಿ.ನಡ್ಡಾ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಈ ವರೆಗೆ ಅನಂತ್ ಕುಮಾರ್ ಈ ಸಮಿತಿಗೆ ಕಾರ್ಯದರ್ಶಿಯಾಗಿದ್ದರು. ಅನಂತ್ ಕುಮಾರ್ ಕೇಂದ್ರ ಸಚಿವರಾಗಿರುವ ಹಿನ್ನಲೆಯಲ್ಲಿ ಅವರ ಸ್ಥಾನಕ್ಕೆ ಜೆ.ಪಿ.ನಡ್ಡಾ ಅವರನ್ನು ನೇಮಕಮಾಡಲಾಗಿದ್ದು, ಅನಂತ್ ಅವರನ್ನು ಸದಸ್ಯರನ್ನಾಗಿ ಮುಂದುವರೆಸಲಾಗಿದೆ.

ಬಿಜೆಪಿಯಲ್ಲಿ ಮಹತ್ವದ ಘಟಕವಾಗಿರುವ ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ 15 ಮಂದಿ ಸದಸ್ಯರಿದ್ದು, ನಡ್ಡಾ ನೇಮಕದೊಂದಿಗೆ ಸದಸ್ಯರ ಸಂಖ್ಯೆ 16ಕ್ಕೆ ಏರಿದಂತಾಗಿದೆ.

ಉಳಿದಂತೆ ಪ್ರಧಾನಿ ನರೇಂದ್ರ ಮೋದಿ, ಸಚಿವರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್, ವೆಂಕಯ್ಯ ನಾಯ್ಡು, ಅನಂತ್ ಕುಮಾರ್ ಹಾಗೂ ನಿತಿನ್ ಗಡ್ಕರಿ ಚುನಾವಣೆಗೆ ಅಭ್ಯರ್ಥಿ ಅಂತಿಮಗೊಳಿಸುವುದು ಪುನಾರಚಿತ ಸಿಇಸಿಯ ಮೊದಲ ಕೆಲಸವಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited